೨ ಅರಸುಗಳು 20:15

ಅವನು--ನಿನ್ನ ಮನೆಯಲ್ಲಿ ಅವರು ಏನು ನೋಡಿದರು ಅಂದನು. ಹಿಜ್ಕೀಯನು--ನನ್ನ ಮನೆಯಲ್ಲಿ ಇದ್ದ ಎಲ್ಲವನ್ನೂ ಅವರು ನೋಡಿದ್ದಾರೆ; ನನ್ನ ಬೊಕ್ಕಸಗಳಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇಲ್ಲ ಅಂದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 20

13ಹಿಜ್ಕೀಯನು ಅವರ ಮಾತು ಕೇಳಿ ತನ್ನ ಎಲ್ಲಾ ಭಂಡಾರದ ಮನೆಯನ್ನೂ ಬೆಳ್ಳಿಯನ್ನೂ ಬಂಗಾರವನ್ನೂ ಸುಗಂಧಗಳನ್ನೂ ಒಳ್ಳೇ ತೈಲವನ್ನೂ ತನ್ನ ಆಯುಧ ಶಾಲೆಯನ್ನೂ ತನ್ನ ಬೊಕ್ಕಸಗಳಲ್ಲಿ ಸಿಕ್ಕಿದ್ದೆಲ್ಲವನ್ನೂ ಅವರಿಗೆ ತೋರಿಸಿದನು. ತನ್ನ ಮನೆ ಯಲ್ಲಿಯೂ ತನ್ನ ಎಲ್ಲಾ ರಾಜ್ಯದಲ್ಲಿಯೂ ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇರಲಿಲ್ಲ.

14ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ--ಆ ಮನುಷ್ಯರು ಏನು ಹೇಳಿದರು? ಅವರು ಎಲ್ಲಿಂದ ನಿನ್ನ ಬಳಿಗೆ ಬಂದರು ಅಂದನು. ಹಿಜ್ಕೀಯನು--ಅವರು ದೂರ ದೇಶದಿಂದ ಅಂದರೆ ಬಾಬೆಲಿನಿಂದ ನನ್ನ ಬಳಿಗೆ ಬಂದಿದ್ದಾರೆ ಅಂದನು.

15ಅವನು--ನಿನ್ನ ಮನೆಯಲ್ಲಿ ಅವರು ಏನು ನೋಡಿದರು ಅಂದನು. ಹಿಜ್ಕೀಯನು--ನನ್ನ ಮನೆಯಲ್ಲಿ ಇದ್ದ ಎಲ್ಲವನ್ನೂ ಅವರು ನೋಡಿದ್ದಾರೆ; ನನ್ನ ಬೊಕ್ಕಸಗಳಲ್ಲಿ ನಾನು ಅವರಿಗೆ ತೋರಿಸದೆ ಇದ್ದದ್ದು ಒಂದಾದರೂ ಇಲ್ಲ ಅಂದನು.

16ಆಗ ಯೆಶಾಯನು ಹಿಜ್ಕೀಯನಿಗೆ--ಕರ್ತನ ವಾಕ್ಯವನ್ನು ಕೇಳು.

17ಇಗೋ, ದಿನಗಳು ಬರುವವು; ಆಗ ನಿನ್ನ ಮನೆಯಲ್ಲಿ ಇರುವದೆಲ್ಲವೂ ನಿನ್ನ ತಂದೆಗಳು ಇಂದಿನ ವರೆಗೂ ಸಂಪಾದಿಸಿ ಇಟ್ಟದ್ದದ್ದೆಲ್ಲವೂ ಬಾಬೆಲಿಗೆ ಒಯ್ಯ ಲ್ಪಡುವದು. ಒಂದೂ ಉಳಿಯುವದಿಲ್ಲವೆಂದು ಕರ್ತನು ಹೇಳುತ್ತಾನೆ;

೨ ಅರಸುಗಳು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी