ದಾನಿಯೇಲನು 9:13

ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ.

ಸಂದರ್ಭದೊಂದಿಗೆ ಓದಿ · ದಾನಿಯೇಲನು 9

11ಹೌದು, ಎಲ್ಲಾ ಇಸ್ರಾಯೇಲ್ಯರು ನಿನ್ನ ನ್ಯಾಯ ಪ್ರಮಾಣವನ್ನು ವಿಾರಿ ನಿನ್ನ ಸ್ವರಕ್ಕೆ ಕಿವಿಗೊಡದೆ ತೊಲಗಿದ್ದದರಿಂದ ಶಾಪವು ದೇವರ ಸೇವಕನಾದ ಮೋಶೆಯು ನ್ಯಾಯ ಪ್ರಮಾಣದಲ್ಲಿ ಬರೆದ ಆಣೆಯು, ಆತನಿಗೆ ವಿರುದ್ಧವಾಗಿ ನಾವು ಮಾಡಿದ ಪಾಪದ ನಿಮಿತ್ತ ನಮ್ಮ ಮೇಲೆ ಹೊಯ್ಯಲ್ಪಟ್ಟಿದೆ.

12ಆತನು ನಮಗೂ ನಮಗೆ ನ್ಯಾಯ ತೀರಿಸಿದ ನ್ಯಾಯಾಧಿಪತಿಗಳಿಗೂ ವಿರೋಧವಾಗಿ ತಾನು ಹೇಳಿದ ಮಾತುಗಳನ್ನು ನೆರವೇರಿಸಿ; ನಮ್ಮ ಮೇಲೆ ದೊಡ್ಡ ಕೇಡು ಬರುವ ಹಾಗೆ ಮಾಡಿದ್ದಾನೆ; ಯೆರೂಸಲೇಮಿನಲ್ಲಿ ನಡೆದ ಹಾಗೆ ಪೂರ್ಣ ಆಕಾಶದ ಕೆಳಗೆಲ್ಲಾ (ಭೂಮಂಡಲದ ಮೇಲೆ) ಎಲ್ಲಿಯೂ ನಡೆಯಲಿಲ್ಲ.

13ಮೋಶೆಯ ನ್ಯಾಯಪ್ರಮಾಣದಲ್ಲಿ ಬರೆದಿರುವ ಪ್ರಕಾರ ಈ ಕೇಡು ನಮ್ಮ ಮೇಲೆ ಬಂತು, ಆದಾಗ್ಯೂ ನಾವು ನಮ್ಮ ಅಕ್ರಮಗಳನ್ನು ಬಿಟ್ಟು, ತಿರುಗಿಕೊಂಡು ನಿನ್ನ ಸತ್ಯವನ್ನು ತಿಳಿದುಕೊಳ್ಳುವ ಹಾಗೆ, ನಮ್ಮ ದೇವರಾದ ಕರ್ತನ ಮುಂದೆ ನಾವು ಪ್ರಾರ್ಥನೆ ಗಳನ್ನು ಮಾಡಲಿಲ್ಲ.

14ಆದದರಿಂದ ಕರ್ತನು ಕೇಡಿ ಗಾಗಿ ಕಾದುಕೊಂಡು ಅದನ್ನು ನಮ್ಮ ಮೇಲೆ ತಂದಿ ದ್ದಾನೆ. ನಮ್ಮ ದೇವರಾದ ಕರ್ತನು ತಾನು ಮಾಡುವ ಎಲ್ಲಾ ಕೆಲಸಗಳಲ್ಲೂ ನೀತಿವಂತನೇ; ನಾವಾದರೋ ಆತನ ಸ್ವರಕ್ಕೆ ವಿಧೇಯರಾಗಲಿಲ್ಲ.

15ಆದರೆ ಈಗ, ಓ ನಮ್ಮ ದೇವರಾದ ಕರ್ತನೇ, ನಿನ್ನ ಭುಜಬಲವನ್ನು ತೋರಿಸಿ ನಿನ್ನ ಜನರನ್ನು ಐಗುಪ್ತದೇಶದೊಳಗಿಂದ ಪಾರುಮಾಡಿ, ಈವರೆಗೂ ಪ್ರಸಿದ್ಧವಾದ ಹೆಸರನ್ನು ಪಡೆದುಕೊಂಡಾತನೇ, ನಾವು ಪಾಪಮಾಡಿ ಕೆಟ್ಟವರಾಗಿ ನಡೆದುಕೊಂಡಿದ್ದೇವೆ.

ದಾನಿಯೇಲನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी