ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು.
1ಆಗ ಮೋಶೆಯೂ ಇಸ್ರಾಯೇಲ್ ಮಕ್ಕಳೂ ಕರ್ತನಿಗೆ ಈ ಹಾಡನ್ನು ಹಾಡಿ ಹೇಳಿದ್ದೇನಂದರೆ--ನಾನು ಕರ್ತನಿಗೆ ಹಾಡುತ್ತೇನೆ; ಆತನು ಪ್ರಭಾವದಿಂದ ಜಯಶಾಲಿಯಾದನು; ಕುದುರೆ ಯನ್ನೂ (ಕುದುರೆಯ) ಸವಾರನನ್ನೂ ಸಮುದ್ರದಲ್ಲಿ ದೊಬ್ಬಿದ್ದಾನೆ.
2ಕರ್ತನು ನನ್ನ ಬಲವೂ ಕೀರ್ತನೆಯೂ ಆಗಿದ್ದಾನೆ, ಆತನು ನನ್ನ ರಕ್ಷಣೆಯಾದನು, ಆತನು ನನ್ನ ದೇವರು, ಆತನಿಗಾಗಿ ನಾನು ಒಂದು ನಿವಾಸವನ್ನು ಸಿದ್ಧಮಾಡುವೆನು. ಆತನು ನನ್ನ ತಂದೆಯ ದೇವರು, ನಾನು ಆತನನ್ನು ಘನಪಡಿಸುವೆನು.
3ಕರ್ತನು ಯುದ್ಧ ಶೂರನು; ಕರ್ತನು ಎಂಬದೇ ಆತನ ಹೆಸರು.
4ಆತನು ಫರೋಹನ ರಥಗಳನ್ನೂ ಅವನ ಸೈನ್ಯವನ್ನೂ ಸಮುದ್ರ ದಲ್ಲಿ ನೂಕಿದ್ದಾನೆ; ಆಯಲ್ಪಟ್ಟ ಅವನ ಅಧಿಪತಿಗಳು ಸಹ ಕೆಂಪು ಸಮುದ್ರದಲ್ಲಿ ಮುಳುಗಿಹೋದರು.
5ಅಗಾಧಗಳು ಅವರನ್ನು ಮುಚ್ಚಿಕೊಂಡವು. ಅವರು ಕಲ್ಲಿನಂತೆ (ಸಮುದ್ರದ) ತಳಕ್ಕೆ ಮುಳುಗಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ