೨ ಸಮುವೇಲನು 14:30

ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 14

28ಹೀಗೆಯೇ ಅಬ್ಷಾಲೋಮನು ಅರಸನ ಮುಖ ವನ್ನು ನೋಡದೆ ಪೂರ್ಣವಾಗಿ ಎರಡು ವರುಷ ಯೆರೂಸಲೇಮಿನಲ್ಲಿ ವಾಸವಾಗಿದ್ದನು.

29ಆದದರಿಂದ ಅಬ್ಷಾಲೋಮನು ಅರಸನ ಬಳಿಗೆ ಕಳುಹಿಸುವದಕ್ಕಾಗಿ ಯೋವಾಬನನ್ನು ಕರೇಕಳುಹಿಸಿದನು. ಆದರೆ ಅವನು ಅವನ ಬಳಿಗೆ ಬರಲ್ಲೊಲ್ಲದೆ ಹೋದನು. ಎರಡನೇ ಸಾರಿ ಅವನನ್ನು ಕರೇಕಳುಹಿಸಿದನು; ಮತ್ತೂ ಅವನು ಬರಲ್ಲೊಲ್ಲದೆ ಹೋದನು.

30ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.

31ಆಗ ಯೋವಾಬನು ಎದ್ದು ಅಬ್ಷಾಲೋಮನ ಮನೆಗೆ ಬಂದು ಅವನಿಗೆ--ನನ್ನ ಹೊಲವನ್ನು ನಿನ್ನ ಸೇವಕರು ಬೆಂಕಿಯಿಂದ ಸುಟ್ಟುಬಿಟ್ಟದ್ದೇನು ಎಂದು ಕೇಳಿದನು.

32ಅಬ್ಷಾಲೋಮನು ಯೋವಾಬನಿಗೆ--ಇಗೋ, ನಾನು ಗೆಷೂರಿನಿಂದ ಯಾಕೆ ಬಂದೆನೆಂದು ಅರಸನಿಗೆ ಹೇಳುವದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ಇಲ್ಲಿಗೆ ಬಾ ಎಂದು ನಿನ್ನನ್ನು ಕರೇಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು; ನನ್ನಲ್ಲಿ ಅಕ್ರಮ ಇದ್ದರೆ ಅವನು ನನ್ನನ್ನು ಕೊಂದುಹಾಕಲಿ ಅಂದನು.

೨ ಸಮುವೇಲನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी