ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
2ಆ ಸಭೆಗಳವರು ಬಹಳ ಹಿಂಸೆಯನ್ನು ತಾಳುವವರಾದರೂ ವಿಪರೀತ ವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.
3ಅವರು ಶಕ್ತ್ಯಾನುಸಾರವಾಗಿ ಮಾತ್ರ ಕೊಡಲಿಲ್ಲ; ಹೌದು, ಶಕ್ತಿಯನ್ನು ವಿಾರಿ ತಮ್ಮಷ್ಟಕ್ಕೆ ತಾವೇ ಕೊಟ್ಟರು; ಇದಕ್ಕೆ ನಾನು ಸಾಕ್ಷಿ.
4ಪರಿಶುದ್ಧರಿಗೆ ದಾನ ಕೊಡುವ ಅನ್ಯೋನ್ಯತೆಯಲ್ಲಿ ತಾವು ಪಾಲುಗಾರ ರಾಗುವಂತೆ ನಮ್ಮನ್ನು ಬಹಳವಾಗಿ ಬೇಡಿಕೊಂಡರು.
5ನಾವು ನಿರೀಕ್ಷಿಸಿದ ಪ್ರಕಾರವಾಗಿ ಅವರು ಕೊಡದೆ ಮೊದಲು ತಮ್ಮನ್ನೇ ಕರ್ತನಿಗೆ ಒಪ್ಪಿಸಿಕೊಟ್ಟರು; ಅನಂತರ ದೇವರ ಚಿತ್ತಾನುಸಾರವಾಗಿ ನಮಗೂ ತಮ್ಮನ್ನು ಒಪ್ಪಿಸಿಕೊಟ್ಟರು.
6ಹೀಗಿರಲಾಗಿ ಈ ಕೃಪಾಕಾರ್ಯವನ್ನು ಪ್ರಾರಂಭಿಸಿದ ತೀತನು ನಿಮ್ಮಲ್ಲಿ ಸಹ ಅದನ್ನು ಕೊನೆಗಾಣಿಸಬೇಕೆಂದು ನಾವು ಅವನನ್ನು ಬೇಡಿಕೊಂಡೆವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ