೨ ಅರಸುಗಳು 4:27

ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 4

25ಆಗ ಏನಾಯಿತಂದರೆ, ದೇವರ ಮನುಷ್ಯನು ದೂರದಿಂದ ಅವಳನ್ನು ನೋಡಿ ಅವನು ತನ್ನ ಸೇವಕನಾದ ಗೇಹಜಿಗೆ -- ಇಗೋ, ಆ ಶೂನೇಮ್ಯಳು.

26ನೀನು ಅವಳನ್ನು ಎದುರುಗೊ ಳ್ಳಲು ಓಡಿಹೋಗಿ ಅವಳಿಗೆ--ನಿನಗೆ ಕ್ಷೇಮವೋ? ನಿನ್ನ ಗಂಡನಿಗೆ ಕ್ಷೇಮವೋ? ಮಗುವಿಗೆ ಕ್ಷೇಮವೋ ಎಂದು ಕೇಳು ಅಂದನು.

27ಅವಳು--ಕ್ಷೇಮವು ಅಂದಳು. ಅವಳು ಬೆಟ್ಟದ ಮೇಲಿದ್ದ, ದೇವರ ಮನು ಷ್ಯನ ಬಳಿಗೆ ಬಂದು ಅವನ ಪಾದಗಳನ್ನು ಹಿಡಿದಳು. ಆದರೆ ಅವಳನ್ನು ತಳ್ಳಲು ಗೇಹಜಿಯು ಹತ್ತಿರ ಬಂದ ದರಿಂದ ದೇವರ ಮನುಷ್ಯನು--ಅವಳನ್ನು ಬಿಡು; ಅವಳ ಹೃದಯದಲ್ಲಿ ದುಃಖವಿದೆ; ಕರ್ತನು ಅದನ್ನು ನನಗೆ ತಿಳಿಸದೆ ಮರೆಮಾಡಿದ್ದಾನೆ ಅಂದನು.

28ಆಗ ಅವಳು--ನಾನು ನನ್ನ ಒಡೆಯನಿಂದ ಕುಮಾರನನ್ನು ಕೇಳಿಕೊಂಡೆನೋ? ನನ್ನನ್ನು ಮೋಸಗೊಳಿಸಬೇಡ ವೆಂದು ನಾನು ಹೇಳಲಿಲ್ಲವೋ ಅಂದಳು.

29ಆಗ ಅವನು ಗೇಹಜಿಗೆ--ನೀನು ನಿನ್ನ ನಡುವನ್ನು ಕಟ್ಟಿ ಕೊಂಡು ನನ್ನ ಕೋಲನ್ನು ನಿನ್ನ ಕೈಯಲ್ಲಿ ಹಿಡುಕೊಂಡು ಹೋಗು. ನಿನಗೆ ಯಾವನಾದರೂ ಎದುರುಗೊಂಡರೆ ಅವನನ್ನು ವಂದಿಸಬೇಡ; ಯಾವನಾದರೂ ನಿನ್ನನ್ನು ವಂದಿಸಿದರೆ ಅವನಿಗೆ ಪ್ರತ್ಯುತ್ತರ ಹೇಳಬೇಡ; ನನ್ನ ಕೋಲನ್ನು ಆ ಹುಡುಗನ ಮುಖದ ಮೇಲೆ ಹಾಕು ಅಂದನು.

೨ ಅರಸುಗಳು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी