ಧರ್ಮೋಪದೇಶಕಾಂಡ 18:3

ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 18

1ಯಾಜಕರಾದ ಲೇವಿಯರಿಗೂ ಆ ಎಲ್ಲಾ ಲೇವಿಯ ಗೋತ್ರಕ್ಕೂ ಇಸ್ರಾಯೇಲಿನ ಸಂಗಡ ಪಾಲೂ ಸ್ವಾಸ್ತ್ಯವೂ ಇರಬಾರದು; ಅವರು ಕರ್ತನ ಬೆಂಕಿಯಿಂದ ಮಾಡಿದ ಬಲಿಗಳನ್ನೂ ಆತನ ಸ್ವಾಸ್ತ್ಯವನ್ನೂ ತಿನ್ನಬೇಕು.

2ಆದದರಿಂದ ಅವರಿಗೆ ಅವರ ಸಹೋದರರ ಮಧ್ಯದಲ್ಲಿ ಸ್ವಾಸ್ತ್ಯವಿರಬಾರದು; ಕರ್ತನು ಅವರಿಗೆ ಹೇಳಿದ ಹಾಗೆ ಆತನೇ ಅವರ ಸ್ವಾಸ್ತ್ಯವಾಗಿದ್ದಾನೆ.

3ಎತ್ತಾಗಲಿ ಕುರಿಯಾಗಲಿ ಒಂದು ಬಲಿಯನ್ನು ಅರ್ಪಿಸುವವರ ಕಡೆಯಿಂದಲೂ ಜನರ ಕಡೆಯಿಂದ ಲೂ ಯಾಜಕರಿಗೆ ಬರತಕ್ಕದ್ದು ಇದೇ: ಮುಂದೊಡೆ ಯನ್ನೂ ಎರಡು ದವಡೆಗಳನ್ನೂ ಕೋಷ್ಟವನ್ನೂ ಯಾಜ ಕನಿಗೆ ಕೊಡಬೇಕು.

4ನಿನ್ನ ಧಾನ್ಯ ದ್ರಾಕ್ಷಾರಸ ಎಣ್ಣೆ ಗಳ ಪ್ರಥಮ ಫಲವನ್ನೂ ನಿನ್ನ ಕುರಿಗಳ ಉಣ್ಣೆ ಯಲ್ಲಿ ಪ್ರಥಮವಾದದ್ದನ್ನೂ ಅವನಿಗೆ ಕೊಡಬೇಕು.

5ಅವನೂ ಅವನ ಕುಮಾರರೂ ನಿತ್ಯವಾಗಿ ಕರ್ತನ ಹೆಸರಿನಲ್ಲಿ ಸೇವಿಸುತ್ತಾ ನಿಂತಿರುವ ಹಾಗೆ ಅವನನ್ನು ನಿನ್ನ ದೇವರಾದ ಕರ್ತನು ನಿನ್ನ ಎಲ್ಲಾ ಗೋತ್ರಗಳೊ ಳಗಿಂದ ಆದುಕೊಂಡಿದ್ದಾನೆ.

ಧರ್ಮೋಪದೇಶಕಾಂಡ 18 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी