ಯೆಹೆಜ್ಕೇಲನು 1:24

ಅವು ಹೋದಾಗ ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು; ಅದು ಜಲಪ್ರವಾಹದ ಶಬ್ದದಂತೆಯೂ ಸರ್ವಶಕ್ತನ ಶಬ್ದದ ಹಾಗೆಯೂ ಸಂದಣಿಯ ಶಬ್ದದಂತೆಯೂ ಸೈನ್ಯದ ಶಬ್ದದ ಹಾಗೆಯೂ ಇತ್ತು; ಅವು ನಿಲ್ಲುವಾಗ ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 1

22ಜೀವಿಯ ತಲೆಗಳ ಮೇಲೆ ಗಗನಮಂಡಲ ವಿಶಾಲ ರೂಪವು ಭೀಕರ ವಜ್ರದ ಬಣ್ಣದ್ದಾಗಿತ್ತು; ಅದು ಅವುಗಳ ತಲೆಗಳ ಮೇಲೆ ಹರ ಡಿತ್ತು (ಹಾಸಲ್ಪಟ್ಟಿತ್ತು).

23ಆ ಗಗನಮಂಡಲದ (ರೂಪದ) ಕೆಳಗೆ ಅವುಗಳ ರೆಕ್ಕೆಗಳು ನೆಟ್ಟಗೆ (ನೇರ ವಾಗಿ) ಒಂದಕ್ಕೊಂದು ಸರಿಯಾಗಿದ್ದವು; ಅವುಗಳ ಶರೀರಗಳನ್ನು ಮುಚ್ಚಿಕೊಳ್ಳುವ ಎರಡೆರೆಡು ರೆಕ್ಕೆಗಳು ಎರಡು ಕಡೆಗಳಲ್ಲೂ ಇರುವ ಪ್ರತಿಯೊಂದನ್ನು ಮುಚ್ಚಿ ಕೊಂಡಿದ್ದವು.

24ಅವು ಹೋದಾಗ ನಾನು ಅವುಗಳ ರೆಕ್ಕೆಗಳ ಶಬ್ದವನ್ನು ಕೇಳಿದೆನು; ಅದು ಜಲಪ್ರವಾಹದ ಶಬ್ದದಂತೆಯೂ ಸರ್ವಶಕ್ತನ ಶಬ್ದದ ಹಾಗೆಯೂ ಸಂದಣಿಯ ಶಬ್ದದಂತೆಯೂ ಸೈನ್ಯದ ಶಬ್ದದ ಹಾಗೆಯೂ ಇತ್ತು; ಅವು ನಿಲ್ಲುವಾಗ ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸುತ್ತಿದ್ದವು.

25ಅವುಗಳು ನಿಂತು ತಮ್ಮ ರೆಕ್ಕೆಗಳನ್ನು ಕೆಳಗೆ ಇಳಿಸಿದಾಗ ಅವುಗಳ ತಲೆಗಳ ಮೇಲಿರುವ ಗಗನಮಂಡಲದೊಳಗಿಂದ ಒಂದು ಶಬ್ದವಾಯಿತು.

26ಅವುಗಳ ತಲೆಗಳ ಮೇಲಿರುವ ಗಗನಮಂಡಲದ ಮೇಲ್ಭಾಗದಲ್ಲಿ ಇಂದ್ರನೀಲಮಣಿಯ ಹಾಗೆ ಇರುವ ಒಂದು ಸಿಂಹಾಸನದ ರೂಪವಿತ್ತು. ಅದರ ಮೇಲೆ ಮನುಷ್ಯನ ಹಾಗೆ ಕಾಣಿಸುವ ಒಂದು ರೂಪವೂ ಇತ್ತು.

ಯೆಹೆಜ್ಕೇಲನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी