೨ ಸಮುವೇಲನು 1:20

ಗತ್‌ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 1

18ಇದ ಲ್ಲದೆ ದಾವೀದನು ಬಿಲ್ಲೆಂಬ ಗೀತವನ್ನು ಯೆಹೂದನ ಮಕ್ಕಳಿಗೆ ಕಲಿಸಬೇಕೆಂದು ಹೇಳಿದನು; ಇಗೋ, ಇದು ಯಾಷಾರಿನ ಪುಸ್ತಕದಲ್ಲಿ ಬರೆಯಲ್ಪಟ್ಟಿದೆ,

19ಏನಂದರೆ--ಇಸ್ರಾಯೇಲಿನ ಸೌಂದರ್ಯವು ಉನ್ನತಸ್ಥಳಗಳ ಮೇಲೆ ಕೊಲ್ಲಲ್ಪಟ್ಟಿದೆ. ಪರಾಕ್ರಮ ಶಾಲಿಗಳು ಹೇಗೆ ಬಿದ್ದರು!

20ಗತ್‌ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರ ಬೇಡಿರಿ. ಫಿಲಿಷ್ಟಿಯರ ಕುಮಾರ್ತೆಯರು ಸಂತೋಷ ಪಟ್ಟಾರಲ್ಲಾ; ಸುನ್ನತಿ ಇಲ್ಲದವರ ಕುಮಾರ್ತೆಯರು ಉತ್ಸಾಹ ಪಟ್ಟಾರಲ್ಲಾ.

21ಗಿಲ್ಬೋವ ಬೆಟ್ಟಗಳೇ, ನಿಮ್ಮ ಮೇಲೆ ಮಂಜೂ ಮಳೆಯೂ ಅರ್ಪಣೆಗಳ ಹೊಲ ಗಳೂ ಇಲ್ಲದೆ ಹೋಗಲಿ. ಯಾಕಂದರೆ ಅಲ್ಲಿ ಪರಾ ಕ್ರಮಶಾಲಿಗಳ ಗುರಾಣಿಯೂ ಸೌಲನ ಗುರಾಣಿಯೂ ಅವಮಾನವಾಗಿ ಬಿದ್ದವು. ಸೌಲನು ಎಣ್ಣೆಯಿಂದ ಅಭಿಷೇಕಿಸಲ್ಪಡದವನ ಹಾಗಾದನು.

22ಕೊಲ್ಲಲ್ಪಟ್ಟ ವರ ರಕ್ತದಿಂದಲೂ ಬಲಶಾಲಿಗಳ ಕೊಬ್ಬಿನಿಂದಲೂ ಯೋನಾತಾನನ ಬಿಲ್ಲು ಹಿಂದಕ್ಕೆ ತಿರುಗಲಿಲ್ಲ; ಸೌಲನ ಕತ್ತಿ ಬರಿದಾಗಿ ತಿರಿಗಿ ಬರಲಿಲ್ಲ.

೨ ಸಮುವೇಲನು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी