ಎಫೆಸದವರಿಗೆ 5:4

ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ.

ಸಂದರ್ಭದೊಂದಿಗೆ ಓದಿ · ಎಫೆಸದವರಿಗೆ 5

2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆ ಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

3ಆದರೆ ನಿಮ್ಮೊಳಗೆ ಜಾರತ್ವವಾಗಲಿ ಯಾವ ಅಶುದ್ಧತ್ವವಾಗಲಿ ಇಲ್ಲವೆ ಲೋಭವಾಗಲಿ ಪರಿಶುದ್ಧರಿಗೆ ತಕ್ಕ ಹಾಗೆ ಇವುಗಳ ಹೆಸರನ್ನು ಒಂದು ಸಲವಾದರೂ ಎತ್ತಬಾರದು.

4ಇಲ್ಲವೆ ಹೊಲಸುತನ ಹುಚ್ಚು ಮಾತು ಕುಚೋದ್ಯ ಇವು ಬೇಡ, ಅಯುಕ್ತವಾಗಿವೆ; ಇವು ಗಳನ್ನು ಬಿಟ್ಟು ಆತನಿಗೆ ಉಪಕಾರ ಸ್ತುತಿಮಾಡುವದೇ ಉತ್ತಮ.

5ಯಾವ ಜಾರನಾಗಲಿ, ಅಶುದ್ಧನಾಗಲಿ, ವಿಗ್ರಹಾರಾಧಕನಂತಿರುವ ಲೋಭಿಯಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯನಾಗುವದಿಲ್ಲವೆಂದು ನೀವು ಬಲ್ಲಿರಲ್ಲವೇ.

6ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.

ಎಫೆಸದವರಿಗೆ 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी