ಯೋಹಾನನು 5:20

ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.

ಸಂದರ್ಭದೊಂದಿಗೆ ಓದಿ · ಯೋಹಾನನು 5

18ಆದದರಿಂದ ಆತನು ಸಬ್ಬತ್ತನ್ನು ವಿಾರಿದ್ದು ಮಾತ್ರವಲ್ಲದೆ ದೇವರನ್ನು ತನ್ನ ಸ್ವಂತ ತಂದೆ ಎಂದು ಕರೆದು ತನ್ನನ್ನು ದೇವರಿಗೆ ಸಮಾನ ಮಾಡಿಕೊಂಡ ಕಾರಣ ಯೆಹೂದ್ಯರು ಆತನನ್ನು ಕೊಲ್ಲುವದಕ್ಕೆ ಇನ್ನಷ್ಟು ಪ್ರಯತ್ನ ಮಾಡಿದರು.

19ಆಗ ಯೇಸು ಪ್ರತ್ಯುತ್ತರವಾಗಿ ಅವರಿಗೆ-- ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ತಂದೆಯು ಮಾಡುವದನ್ನು ಕಂಡದ್ದನ್ನಲ್ಲದೆ ಮಗನು ತನ್ನಷ್ಟಕ್ಕೆ ತಾನೇ ಯಾವದನ್ನೂ ಮಾಡಲಾರನು; ಆತನು ಮಾಡುವದನ್ನೆಲ್ಲಾ ಹಾಗೆಯೇ ಮಗನೂ ಮಾಡುವನು.

20ಯಾಕಂದರೆ ತಂದೆಯು ಮಗನನ್ನು ಪ್ರೀತಿಸಿ ತಾನು ಸ್ವತಃ ಮಾಡುವವುಗಳನ್ನೆಲ್ಲಾ ಮಗನಿಗೆ ತೋರಿಸುತ್ತಾನೆ; ನೀವು ಆಶ್ಚರ್ಯಪಡುವ ಹಾಗೆ ಇವುಗಳಿಗಿಂತ ಮಹತ್ತಾದ ಕೆಲಸಗಳನ್ನು ಆತನಿಗೆ ತೋರಿಸುವನು.

21ತಂದೆಯು ಹೇಗೆ ಸತ್ತವರನ್ನು ಎಬ್ಬಿಸಿ ಬದುಕಿಸುತ್ತಾನೋ ಹಾಗೆಯೇ ಮಗನೂ ತನಗೆ ಇಷ್ಟವಿರು ವವರನ್ನು ಬದುಕಿಸುತ್ತಾನೆ.

22ಇದಲ್ಲದೆ ತಂದೆಯು ಯಾರಿಗೂ ತೀರ್ಪು ಮಾಡುವದಿಲ್ಲ;

ಯೋಹಾನನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी