ರೋಮಾಪುರದವರಿಗೆ 11:3

ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ?

ಸಂದರ್ಭದೊಂದಿಗೆ ಓದಿ · ರೋಮಾಪುರದವರಿಗೆ 11

1ಹಾಗಾದರೆ--ದೇವರು ತನ್ನ ಪ್ರಜೆಯನ್ನು ತಳ್ಳಿಬಿಟ್ಟದ್ದುಂಟೇ ಎಂದು ನಾನು ಕೇಳುತ್ತೇನೆ. ಹಾಗೆ ಎಂದಿಗೂ ಹೇಳಬಾರದು. ಯಾಕಂದರೆ ನಾನು ಸಹ ಇಸ್ರಾಯೇಲ್ಯನು. ಅಬ್ರ ಹಾಮನ ಸಂತತಿಯವನು, ಬೆನ್ಯಾವಿಾನನ ಗೋತ್ರ ದವನು ಆಗಿದ್ದೇನಲ್ಲಾ.

2ದೇವರು ಮುಂದಾಗಿ ಅರಿತುಕೊಂಡಿದ್ದ ತನ್ನ ಜನರನ್ನು ತಳ್ಳಿಹಾಕಲಿಲ್ಲ. ಎಲೀಯನ ವಿಷಯವಾಗಿಯಾದರೋ ಅವನು ಇಸ್ರಾಯೇಲ್ಯರಿಗೆ ವಿರೋಧವಾಗಿ ದೇವರಿಗೆ ವಿಜ್ಞಾಪನೆ ಮಾಡುತ್ತಾ--

3ಕರ್ತನೇ, ಅವರು ನಿನ್ನ ಪ್ರವಾದಿಗಳನ್ನು ಕೊಂದು ನಿನ್ನ ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ; ಆದರೆ ನಾನೊಬ್ಬನೇ ಉಳಿದಿದ್ದೇನೆ; ಅವರು ನನ್ನ ಪ್ರಾಣವನ್ನು ತೆಗೆಯಲು ಹುಡುಕುತ್ತಿದ್ದಾರೆ ಎಂದು ಬರಹವು ಹೇಳಿದ್ದು ನಿಮಗೆ ಗೊತ್ತಿಲ್ಲವೋ?

4ಆದರೆ ದೇವರು ಅವನಿಗೆ ಕೊಟ್ಟ ಉತ್ತರವೇನಂದರೆ--ಬಾಳನ ವಿಗ್ರಹಕ್ಕೆ ಮೊಣಕಾಲೂರದ ಏಳುಸಾವಿರ ಜನರನ್ನು ನಾನು ನನಗೋಸ್ಕರ ಉಳಿಸಿಕೊಂಡಿದ್ದೇನೆ ಎಂಬದು.

5ಅದರಂತೆ ಈಗಿನ ಕಾಲದಲ್ಲಿ ಕೃಪೆಯ ಆಯ್ಕೆಯ ಪ್ರಕಾರ ಒಂದಂಶವು ಉಳಿದಿದೆ.

ರೋಮಾಪುರದವರಿಗೆ 11 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी