ಯೆರೆಮಿಯ 49:26

ಆದದರಿಂದ ಅದರ ಯೌವನಸ್ಥರು ಚೌಕಗಳಲ್ಲಿ ಬೀಳುವರು; ಯುದ್ಧಸ್ಥರೆಲ್ಲರೂ ಆ ದಿನದಲ್ಲಿ ಕಡಿದುಹಾಕಲ್ಪಡುವರು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 49

24ದಮಸ್ಕವು ನಿತ್ರಾಣವಾಯಿತು; ಓಡಿ ಹೋಗುವದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡುಕೊಂಡಿದೆ. ಹೆರುವ ಸ್ತ್ರೀಯ ಹಾಗೆ ಸಂಕಟವೂ ವೇದನೆಗಳೂ ಅದನ್ನು ಹಿಡಿದವೆ.

25ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲ್ಪಟ್ಟಿದೆಯಲ್ಲವೋ?

26ಆದದರಿಂದ ಅದರ ಯೌವನಸ್ಥರು ಚೌಕಗಳಲ್ಲಿ ಬೀಳುವರು; ಯುದ್ಧಸ್ಥರೆಲ್ಲರೂ ಆ ದಿನದಲ್ಲಿ ಕಡಿದುಹಾಕಲ್ಪಡುವರು ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ.

27ನಾನು ದಮಸ್ಕದ ಗೋಡೆಯಲ್ಲಿ ಬೆಂಕಿಯನ್ನು ಹಚ್ಚುತ್ತೇನೆ; ಅದು ಬೆನ್‌ಹದದನ ಅರಮನೆಗಳನ್ನು ತಿಂದುಬಿಡುವದು.

28ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆಯಲಿಕ್ಕಿರುವ ಕೇದಾರಿನ ವಿಷಯವಾಗಿಯೂ ಹಾಚೋರಿನ ರಾಜ್ಯಗಳ ವಿಷಯವಾಗಿಯೂ ಕರ್ತನು ಹೀಗೆ ಹೇಳುತ್ತಾನೆ--ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ! ಪೂರ್ವದಿಕ್ಕಿನ ಮನುಷ್ಯರನ್ನು ಸುಲು ಕೊಳ್ಳಿರಿ.

ಯೆರೆಮಿಯ 49 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी