ಯೆಹೆಜ್ಕೇಲನು 29:19

ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 29

17ಇಪ್ಪತ್ತೇಳನೇ ವರುಷದ ಮೊದಲನೇ ತಿಂಗಳಿನ, ಮೊದಲನೇ ದಿನದಲ್ಲಿ ಆದದ್ದೇನಂದರೆ ಕರ್ತನ ವಾಕ್ಯವು ನನಗೆ ಬಂದು ಹೀಗೆ ಹೇಳಿತು.

18ಮನುಷ್ಯ ಪುತ್ರನೇ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತೂರಿಗೆ ಮುತ್ತಿಗೆ ಹಾಕಿ ತನ್ನ ಸೈನಿಕರಿಂದ ಅತಿಶ್ರಮ ವಾದ ಸೇವೆಯನ್ನು ಮಾಡಿಸಿದನು. ಪ್ರತಿಯೊಬ್ಬನ ತಲೆ ಬೋಳಾಗಿದೆ, ಪ್ರತಿಯೊಬ್ಬನ ಹೆಗಲೂ ಸುಲಿದು ಹೋಗಿದೆ. ಆದರೆ ಅವನು ಆ ಮುತ್ತಿಗೆಯಲ್ಲಿ ಪಟ್ಟ ಶ್ರಮಕ್ಕೆ ಅವನಿಗಾಗಲೀ ಅವನ ಸೈನಿಕರಿಗಾಗಲೀ ತೂರ್‌ನಿಂದ ಪ್ರತಿಫಲವೇನೂ ದೊರೆಯಲಿಲ್ಲ.

19ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ನಾನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಗೆ ಐಗುಪ್ತದೇಶವನ್ನು ಕೊಡುತ್ತೇನೆ, ಅವನು ಅದರ ಜನಸಮೂಹವನ್ನೂ ಕೊಳ್ಳೆಯನ್ನೂ ಸುಲಿಗೆಯನ್ನು ಸೂರೆಮಾಡುವನು. ಇದೇ ಅವನ ದಂಡು ಪಟ್ಟ ಶ್ರಮಕ್ಕೆ ಪ್ರತಿಫಲವಾಗುವದು.

20ಅವನು ಅದಕ್ಕೆ ವಿರುದ್ಧವಾಗಿ ಪಟ್ಟ ಕಷ್ಟಗಳಿಗೋಸ್ಕರ ನಾನು ಅವನಿಗೆ ಐಗುಪ್ತದೇಶವನ್ನು ಕೊಟ್ಟಿದ್ದೇನೆ; ನನಗೋಸ್ಕರ ಅದನ್ನು ಮಾಡಿದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.

21ಆ ದಿನದಲ್ಲಿ ನಾನು ಇಸ್ರಾಯೇಲ್ಯರ ಮನೆ ತನದವರ ಕೊಂಬನ್ನು ಚಿಗುರಿಸುವೆನು. ಅವರ ಮಧ್ಯ ದಲ್ಲಿ ನಿನ್ನ ಬಾಯನ್ನು ತೆರೆಯುವಂತೆ ಮಾಡುವೆನು. ನಾನೇ ಕರ್ತನೆಂದು ಅವರು ತಿಳಿಯುವರು.

ಯೆಹೆಜ್ಕೇಲನು 29 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी