ಧರ್ಮೋಪದೇಶಕಾಂಡ 24:7

ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 24

5ಒಬ್ಬನು ಹೊಸದಾಗಿ ಹೆಂಡತಿಯನ್ನು ತಕ್ಕೊಂಡರೆ ಯುದ್ಧಕ್ಕೆ ಹೊರಡಬಾರದು; ಅವನಿಂದ ಯಾವ ದೊಂದೂ ಕೆಲಸವನ್ನು ಮಾಡಿಸಬಾರದು; ಅವನು ಒಂದು ವರುಷ ಬಿಡುಗಡೆಯಾಗಿ ತನ್ನ ಮನೆಯಲ್ಲಿದ್ದು ತಾನು ತಕ್ಕೊಂಡ ಹೆಂಡತಿಯನ್ನು ಸಂತೋಷ ಪಡಿಸಬೇಕು.

6ಬೀಸುವ ಕಲ್ಲಿನಲ್ಲಿ ಅಡಿಕಲ್ಲಾದರೂ ಮೇಲ್ಕಲ್ಲಾ ದರೂ ಒತ್ತೆಯಾಗಿ ತಕ್ಕೊಳ್ಳಬಾರದು; ಹಾಗೆ ಮಾಡಿದರೆ ಪ್ರಾಣವನ್ನು ಒತ್ತೆಯಾಗಿ ತಕ್ಕೊಂಡ ಹಾಗಿರುವದು.

7ಒಬ್ಬನು ತನ್ನ ಸಹೋದರರಾದ ಇಸ್ರಾಯೇಲ್‌ ಮಕ್ಕಳಲ್ಲಿ ಒಬ್ಬನನ್ನು ಕದ್ದು ವ್ಯಾಪಾರಮಾಡಿ ಮಾರಿದ ವನಾಗಿ ಸಿಕ್ಕಿದರೆ ಆ ಕಳ್ಳನು ಸಾಯಬೇಕು; ಹೀಗೆ ಕೆಟ್ಟದ್ದನ್ನು ನಿನ್ನ ಮಧ್ಯದಲ್ಲಿಂದ ತೆಗೆದುಹಾಕಬೇಕು.

8ಕುಷ್ಠದ ಬಾಧೆಯಲ್ಲಿ ಲೇವಿಯರಾದ ಯಾಜಕರು ನಿಮಗೆ ಬೋಧಿಸುವದನ್ನೆಲ್ಲಾ ನೀನು ಜಾಗ್ರತೆಯಿಂದ ಕಾಪಾಡಿ ಕೈಕೊಳ್ಳುವ ಹಾಗೆ ನೋಡಿಕೋ; ನಾನು ಅವರಿಗೆ ಆಜ್ಞೆ ಕೊಟ್ಟಹಾಗೆ ನೀವು ಕಾಪಾಡಿ ಕೈಕೊಳ್ಳ ಬೇಕು;

9ನೀವು ಐಗುಪ್ತದಿಂದ ಹೊರಗೆ ಬರುವಾಗ ನಿನ್ನ ದೇವರಾದ ಕರ್ತನು ಮಿರ್ಯಾಮಳಿಗೆ ಮಾರ್ಗದಲ್ಲಿ ಮಾಡಿದ್ದನ್ನು ಜ್ಞಾಪಕಮಾಡಿಕೋ.

ಧರ್ಮೋಪದೇಶಕಾಂಡ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी