ದಾನಿಯೇಲನು 9:22

ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ.

ಸಂದರ್ಭದೊಂದಿಗೆ ಓದಿ · ದಾನಿಯೇಲನು 9

20ನಾನು ಮಾತನಾಡುತ್ತಾ ಪ್ರಾರ್ಥನೆ ಮಾಡುತ್ತಾ ನನ್ನ ಪಾಪವನ್ನೂ ನನ್ನ ಜನರಾದ ಇಸ್ರಾಯೇಲ್ಯರ ಪಾಪವನ್ನೂ ಅರಿಕೆಮಾಡುತ್ತಾ ನನ್ನ ದೇವರ ಪರಿಶುದ್ಧ ಪರ್ವತಕ್ಕೋಸ್ಕರ ನನ್ನ ವಿಜ್ಞಾಪನೆಯನ್ನು ನನ್ನ ದೇವರಾದ ಕರ್ತನ ಮುಂದೆ ಅರ್ಪಿಸುತ್ತಾ ಇದ್ದೆನು.

21ಹೌದು, ನಾನು ಪ್ರಾರ್ಥನೆಯಲ್ಲಿ ಮಾತನಾಡುತ್ತಿ ರುವಾಗ ನಾನು ಮೊದಲಿನ ದರ್ಶನದಲ್ಲಿ ಕಂಡ ಗಬ್ರಿಯೇಲನೆಂಬ ಮನುಷ್ಯನು ಬೇಗನೆ ಹಾರಿಬಂದು ಸುಮಾರು ಸಾಯಂಕಾಲದ ಕಾಣಿಕೆಯನ್ನು ಅರ್ಪಿಸುವ ಹೊತ್ತಿನಲ್ಲಿ ನನ್ನನ್ನು ಮುಟ್ಟಿದನು.

22ಅವನು ನನಗೆ ತಿಳಿಸಿ ನನ್ನೊಡನೆ ಮಾತಾಡಿ ಹೇಳಿದ್ದೇನಂದರೆ--ಓ ದಾನಿಯೇಲನೇ, ನಿನಗೆ ವಿವೇಕವನ್ನೂ ಬುದ್ಧಿಯನ್ನೂ ಕೊಡುವದಕ್ಕೆ ಈಗ ನಾನು ಬಂದಿದ್ದೇನೆ.

23ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ಆಜ್ಞೆಯು ಬಂದಿತು. ಅದನ್ನು ನಿನಗೆ ತಿಳಿಸುವದಕ್ಕೆ ನಾನು ಬಂದಿದ್ದೇನೆ; ನೀನು ಅತಿಪ್ರಿಯನಾಗಿರುವಿ. ಆದದರಿಂದ ವಿಷಯ ವನ್ನು ಗ್ರಹಿಸಿಕೊಂಡು ದರ್ಶನವನ್ನು ಆಲೋಚಿಸು.

24ಅಕ್ರಮಗಳನ್ನು ಮುಗಿಸುವದಕ್ಕೂ ಪಾಪಗಳನ್ನು ಮುಚ್ಚುವದಕ್ಕೂ ಅಪರಾಧಗಳಿಗೆ ಪ್ರಾಯಶ್ಚಿತ್ತ ಮಾಡು ವದಕ್ಕೂ ನಿತ್ಯವಾದ ನೀತಿಯನ್ನು ಬರಮಾಡುವದಕ್ಕೂ ಆ ದರ್ಶನಕ್ಕೂ ಪ್ರವಾದಿಗೂ ಮುದ್ರೆಹಾಕುವದಕ್ಕೂ ಅತಿಪರಿಶುದ್ಧನನ್ನು ಅಭಿಷೇಕ ಮಾಡುವದಕ್ಕೂ ನಿನ್ನ ಜನರ ಮೇಲೆಯೂ ನಿನ್ನ ಪರಿಶುದ್ಧ ಪಟ್ಟಣದ ಮೇಲೆಯೂ ಎಪ್ಪತ್ತು ವಾರಗಳು ನೇಮಿಸಲ್ಪಟ್ಟಿವೆ.

ದಾನಿಯೇಲನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी