ಯೆಹೆಜ್ಕೇಲನು 39:4

ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 39

2ನಾನು ನಿನ್ನನ್ನು ಹಿಂದಕ್ಕೆ ತಿರುಗಿಸಿ, ನಿನ್ನನ್ನು ಆರನೆಯ ಭಾಗವನ್ನಾಗಿ ಮಾಡಿಬಿಡುವೆನು; ಉತ್ತರದ ಭಾಗಗಳಿಂದ ಬರುವಂತೆ ಮಾಡುವೆನು ಮತ್ತು ನಿನ್ನನ್ನು ಇಸ್ರಾಯೇಲ್ಯರ ಪರ್ವತಗಳ ಮೇಲೆ ತರುವೆನು;

3ನಾನು ನಿನ್ನ ಎಡಗೈಯಲ್ಲಿರುವ ಬಿಲ್ಲನ್ನು ಹೊಡೆಯುವೆನು ನಿನ್ನ ಬಲಗೈಯಲ್ಲಿರುವ ಬಾಣಗಳು ಉದುರಿ ಬೀಳುವಂತೆ ಮಾಡುವೆನು.

4ನೀನೂ ನಿನ್ನ ಎಲ್ಲಾ ದಳಗಳೂ ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ; ಎಲ್ಲಾ ತರಹದ ಮಾಂಸ ತಿನ್ನುವ ಪಕ್ಷಿಗಳಿಗೂ ಬಯಲಿನ ಮೃಗಗಳಿಗೂ ತಿನ್ನುವಂತೆ ನಾನು ನಿನ್ನನ್ನು ಕೊಡುವೆನು.

5ನೀನು ತೆರೆದ ಬಯಲಿನ ಮೇಲೆ ಬೀಳುವಿ; ನಾನೇ ಇದನ್ನು ಹೇಳಿರುವೆನು ಎಂದು ದೇವರಾದ ಕರ್ತನು ಹೇಳುತ್ತಾನೆ.

6ನಾನು ಮಾಗೋಗ್‌ ಮತ್ತು ಅವ ರೊಂದಿಗೆ ದ್ವೀಪಗಳಲ್ಲಿ ನಿರ್ಲಕ್ಷ್ಯವಾಗಿ ವಾಸಿಸುವವರ ಮೇಲೆ ಬೆಂಕಿಯನ್ನು ಕಳುಹಿಸುತ್ತೇನೆ; ಅವರು ನಾನೇ ಕರ್ತನೆಂದು ತಿಳಿಯುವರು.

ಯೆಹೆಜ್ಕೇಲನು 39 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी