೨ ಸಮುವೇಲನು 21:7

ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 21

5ಅವರು ಅರಸನಿಗೆಯಾವನು ನಮ್ಮನ್ನು ಸಂಹರಿಸಿಬಿಟ್ಟು ನಾವು ಇಸ್ರಾ ಯೇಲಿನ ಎಲ್ಲಾ ಮೇರೆಗಳೊಳಗೆ ನಿಲ್ಲದೆ ನಾಶವಾಗುವ ಹಾಗೆ

6ನಮಗೆ ಕೇಡುಮಾಡಲು ನೆನಸಿದನೋ ಅವನ ಕುಮಾರರಲ್ಲಿ ಏಳು ಮಂದಿ ನಮಗೆ ಒಪ್ಪಿಸಲ್ಪಡಲಿ. ಆಗ ನಾವು ಕರ್ತನು ಆದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಕರ್ತನಿಗೋಸ್ಕರ ಗಲ್ಲಿಗೆ ಹಾಕು ವೆವು ಅಂದರು. ಅದಕ್ಕೆ ಅರಸನು--ನಾನು ಒಪ್ಪಿಸಿ ಕೊಡುವೆನು ಅಂದನು.

7ಆದರೆ ತಮಗೂ ದಾವೀದ ನಿಗೂ ಸೌಲನ ಮಗನಾದ ಯೋನಾತಾನನಿಗೂ ಕರ್ತ ನನ್ನು ಕುರಿತು ಮಾಡಿದ ಪ್ರಮಾಣಕ್ಕೋಸ್ಕರ ಅರಸನು ಸೌಲನ ಮೊಮ್ಮಗನೂ ಯೋನಾತಾನನ ಮಗನೂ ಆದ ಮೆಫೀಬೋಶೆತನನ್ನು ಉಳಿಸಿ

8ಅಯ್ಯಾಹನ ಮಗಳಾಗಿರುವ ರಿಚ್ಪಳು ಸೌಲನಿಗೆ ಹೆತ್ತ ಅವಳ ಇಬ್ಬರ ಮಕ್ಕಳಾದ ಅರ್ಮೋನೀಯನ್ನೂ ಮೆಫೀಬೋ ಶೆತ ನನ್ನೂ ಸೌಲನ ಮಗಳಾಗಿರುವ ವಿಾಕಲಳು ಮೆಹೋಲದವನಾದ ಬರ್ಜಿಲ್ಲೈಯ ಮಗನಾಗಿರುವ ಅದ್ರೀಯೇಲನಿಗೆ ಸಾಕಿದ ಐದು ಮಂದಿ ಮಕ್ಕಳನ್ನೂ ಹಿಡುಕೊಂಡು

9ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಇವರು ಅವರನ್ನು ಕರ್ತನ ಮುಂದೆ ಬೆಟ್ಟದ ಮೇಲೆ ಗಲ್ಲಿಗೆ ಹಾಕಿದರು. ಹಾಗೆಯೇ ಈ ಏಳು ಮಂದಿಯೂ ಒಂದೇ ಸಾರಿ ಬಿದ್ದರು. ಜವೆ ಗೋಧಿಯ ಸುಗ್ಗಿಯ ದಿನದ ಪ್ರಾರಂಭದಲ್ಲಿ ಅವರು ಕೊಂದುಹಾಕಲ್ಪಟ್ಟರು.

೨ ಸಮುವೇಲನು 21 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी