ಯೆಹೆಜ್ಕೇಲನು 10:6

ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ--ಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು. ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 10

4ಆಗ ಕರ್ತನ ಮಹಿಮೆಯು ಕೆರೂಬಿಗಳನ್ನು ಬಿಟ್ಟು ಮೇಲಕ್ಕೆ ಹೋಗಿ ಆಲಯದ ಹೊಸ್ತಿಲಲ್ಲಿ ನಿಂತಿತು, ಆಲಯವು ಮೇಘದಿಂದ ತುಂಬಿತ್ತು. ಆಗ ಕರ್ತನ ಮಹಿಮೆಯ ಪ್ರಕಾಶವು ಅಂಗಳದಲ್ಲಿ ತುಂಬಿತ್ತು.

5ಕೆರೂಬಿಗಳ ರೆಕ್ಕೆಗಳ ಶಬ್ದವು ಮಾತನಾಡುವ ಸರ್ವಶಕ್ತನ ದೇವರ ಹಾಗೆ ಹೊರಗಣ ಅಂಗಳದ ವರೆಗೂ ಕೇಳಿಬಂತು.

6ಆತನು ನಾರು ಮಡಿಯನ್ನು ಧರಿಸಿಕೊಂಡ ಮನುಷ್ಯನಿಗೆ--ಚಕ್ರಗಳ ಮಧ್ಯದಿಂದಲೂ ಕೆರೂಬಿಯರ ಮಧ್ಯದಿಂದಲೂ ಬೆಂಕಿ ಯನ್ನು ತೆಗೆದುಕೊಳ್ಳಲು ಆಜ್ಞಾಪಿಸಿದನು. ಅವನು ಒಳಗೆ ಹೋಗಿ ಚಕ್ರಗಳ ಬಳಿಯಲ್ಲಿ ನಿಂತನು.

7ಒಬ್ಬ ಕೆರೂಬಿಯನು ಕೆರೂಬಿಯರ ಮಧ್ಯದೊಳಗಿಂದ ತನ್ನ ಕೈಯನ್ನು ಕೆರೂಬಿಯರ ಮಧ್ಯದೊಳಗಿರುವ ಬೆಂಕಿಗೆ ಚಾಚಿ, ತಕ್ಕೊಂಡು ನಾರುಮಡಿಯನ್ನು ಧರಿಸಿಕೊಂಡಿ ದ್ದವನ ಕೈಗೆ ಇಟ್ಟನು. ಇವನು ಅದನ್ನು ತೆಗೆದುಕೊಂಡು ಹೊರಗೆ ಹೋದನು.

8ಕೆರೂಬಿಯರಲ್ಲಿ ಅವರ ರೆಕ್ಕೆ ಗಳ ಕೆಳಗೆ ಮನುಷ್ಯನ ಕೈಗೆ ಸಮಾನವಾದದ್ದು ಕಂಡುಬಂತು.

ಯೆಹೆಜ್ಕೇಲನು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी