೧ ಸಮುವೇಲನು 14:19

ಸೌಲನು ಯಾಜಕನ ಸಂಗಡ ಇನ್ನೂ ಮಾತಾನಾಡುತ್ತಿರುವಾಗ ಏನಾಯಿತಂದರೆ ಫಿಲಿಷ್ಟಿಯರ ದಂಡಿನಲ್ಲಿ ಗದ್ದಲವು ಅಧಿಕವಾಗುತ್ತಾ ಇದದ್ದರಿಂದ ಸೌಲನು ಯಾಜಕನಿಗೆ ನಿನ್ನ ಕೈಯನ್ನು ಹಿಂದಕ್ಕೆ ತಕ್ಕೋ ಅಂದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 14

17ಆಗ ಸೌಲನು ತನ್ನ ಬಳಿಯಲ್ಲಿದ್ದ ಜನರಿಗೆ--ನಮ್ಮ ಬಳಿಯಿಂದ ಹೋದವರು ಯಾರೆಂದು ಲೆಕ್ಕವನ್ನು ನೋಡಿರಿ ಅಂದನು. ಅವರು ಲೆಕ್ಕ ನೋಡುವಾಗ ಇಗೋ, ಯೋನಾತಾನನೂ ಅವನ ಆಯುಧಗಳನ್ನು ಹೊರುವವನೂ ಅಲ್ಲಿ ಇರಲಿಲ್ಲ.

18ಆಗ ಸೌಲನು ಅಹೀಯನಿಗೆ -- ನೀನು ದೇವರ ಮಂಜೂಷವನ್ನು ತಕ್ಕೊಂಡು ಬಾ ಅಂದನು. ಯಾಕಂದರೆ ದೇವರ ಮಂಜೂಷವು ಆ ಕಾಲದಲ್ಲಿ ಇಸ್ರಾಯೇಲ್‌ ಮಕ್ಕಳ ಬಳಿಯಲ್ಲಿತ್ತು.

19ಸೌಲನು ಯಾಜಕನ ಸಂಗಡ ಇನ್ನೂ ಮಾತಾನಾಡುತ್ತಿರುವಾಗ ಏನಾಯಿತಂದರೆ ಫಿಲಿಷ್ಟಿಯರ ದಂಡಿನಲ್ಲಿ ಗದ್ದಲವು ಅಧಿಕವಾಗುತ್ತಾ ಇದದ್ದರಿಂದ ಸೌಲನು ಯಾಜಕನಿಗೆ ನಿನ್ನ ಕೈಯನ್ನು ಹಿಂದಕ್ಕೆ ತಕ್ಕೋ ಅಂದನು.

20ಆಗ ಸೌಲನೂ ಅವನ ಸಂಗಡ ಇದ್ದ ಜನರೆಲ್ಲರೂ ಕೂಡಿಕೊಂಡು ಯುದ್ಧಕ್ಕೆ ಬಂದಾಗ ಇಗೋ, ಪ್ರತಿಯೊಬ್ಬನು ತನ್ನ ಜೊತೆಗಾರನನ್ನು ಕತ್ತಿ ಯಿಂದ ಕೊಂದುಬಿಟ್ಟದ್ದರ ಪರಿಣಾಮವಾಗಿ ಅಲ್ಲಿ ಬಹು ದೊಡ್ಡ ಸೋಲು ಉಂಟಾಯಿತು.

21ಇದಲ್ಲದೆ ಪೂರ್ವದಲ್ಲಿ ಫಿಲಿಷ್ಟಿಯರ ಬಳಿಯಲ್ಲಿದ್ದು ಅವರ ಕೂಡ ದಂಡಿನ ಸಂಗಡ ಸುತ್ತಲಿರುವ ದೇಶದಿಂದ ಬಂದ ಇಬ್ರಿಯರು ಸೌಲ ಯೋನಾತಾನನ ಮತ್ತು ಇಸ್ರಾಯೇಲ್ಯರ ಸಂಗಡ ಕೂಡಿಕೊಂಡರು.

೧ ಸಮುವೇಲನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी