ಯೆಹೆಜ್ಕೇಲನು 17:6

ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷೇ ಗಿಡವಾಯಿತು; ಅದರ ಬಳ್ಳಿಗಳು ಅದರ ಕಡೆಗೆ ತಿರುಗಿ ಕೊಂಡವು, ಅದರ ಬೇರುಗಳು ಅದರ ಕೆಳಗಿದ್ದವು; ಹೀಗೆ ಅದು ದ್ರಾಕ್ಷೇ ಗಿಡವಾಯಿತು, ಕೊಂಬೆಗಳು ಒಡೆದು ಬಳ್ಳಿಗಳು ಹಬ್ಬಿದವು.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 17

4ಅದರ ಚಿಗುರುಗಳ ಕೊನೆಯನ್ನು ಕಿತ್ತು ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ವರ್ತಕರಿರುವ ನಗರದಲ್ಲಿ ಇಟ್ಟಿತು.

5ಅದು ದೇಶದ ಬೀಜವನ್ನೂ ಸಹ ತೆಗೆದು ಕೊಂಡು ಹೋಗಿ ಫಲವುಳ್ಳ ಹೊಲದಲ್ಲಿ ಇರಿಸಿತು; ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿಸಿತು.

6ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷೇ ಗಿಡವಾಯಿತು; ಅದರ ಬಳ್ಳಿಗಳು ಅದರ ಕಡೆಗೆ ತಿರುಗಿ ಕೊಂಡವು, ಅದರ ಬೇರುಗಳು ಅದರ ಕೆಳಗಿದ್ದವು; ಹೀಗೆ ಅದು ದ್ರಾಕ್ಷೇ ಗಿಡವಾಯಿತು, ಕೊಂಬೆಗಳು ಒಡೆದು ಬಳ್ಳಿಗಳು ಹಬ್ಬಿದವು.

7ದೊಡ್ಡ ರೆಕ್ಕೆಗಳೂ ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು; ಆಗ ಇಗೋ, ಆ ದ್ರಾಕ್ಷೇ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರ ಮೂಲಕ ನೀರನ್ನು ಹಾಯಿಸುತ್ತಿತ್ತು.

8ಅದು ಕೊಂಬೆ ಗಳನ್ನು ಬೆಳೆಸಿ ಫಲಫಲಿಸುವ ಹಾಗೆಯೂ ಒಳ್ಳೇ ದ್ರಾಕ್ಷೇಗಿಡ ಆಗುವ ಹಾಗೆಯೂ ಒಳ್ಳೇ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲ್ಪಟ್ಟಿತು.

ಯೆಹೆಜ್ಕೇಲನು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी