ಎಜ್ರನು 4:15

ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ.

ಸಂದರ್ಭದೊಂದಿಗೆ ಓದಿ · ಎಜ್ರನು 4

13ಈ ಪಟ್ಟಣವು ಕಟ್ಟಿಸಲ್ಪಟ್ಟು ಅದರ ಗೋಡೆಕಟ್ಟಿ ತೀರಿಸ ಲ್ಪಟ್ಟರೆ ಅವರು ಸುಂಕವನ್ನೂ ಕಪ್ಪವನ್ನೂ ತೆರಿಗೆಯನ್ನೂ ಕೊಡದೆ ಇರುವರು. ಆಗ ನೀನು ಅರಸು ಗಳಿಗೆ ಬರುವ ಹುಟ್ಟುವಳಿಗೆ ನಷ್ಟಮಾಡುವಿ ಎಂದು ಅರಸನಿಗೆ ತಿಳಿದಿರಲಿ.

14ಆದರೆ ನಾವು ಅರಮನೆಯ ಉಪ್ಪನ್ನು ತಿಂದದ್ದರಿಂದ ಅರಸನ ಅವಮಾನವನ್ನು ನೋಡುವದು ನಮಗೆ ತಕ್ಕದ್ದಲ್ಲ; ಆದದರಿಂದ ನಾವು ಅರಸನ ಬಳಿಗೆ ಇದನ್ನು ಕಳುಹಿಸಿ ತಿಳಿಯಮಾಡಿ ದ್ದೇವೆ.

15ನಿನ್ನ ತಂದೆಗಳ ವೃತಾಂತಗಳ ಪುಸ್ತಕದಲ್ಲಿ ವಿಚಾರಿಸಿದರೆ ಈ ಪಟ್ಟಣವು ತಿರಿಗಿ ಬೀಳುವುದೆಂದೂ ಅರಸುಗಳಿಗೂ ದೇಶಗಳಿಗೂ ನಷ್ಟಮಾಡುವಂಥ ದೆಂದೂ ಪೂರ್ವ ಕಾಲದಲ್ಲಿ ಅದರೊಳಗಿದ್ದವರು ತಿರಿಗಿ ಬಿದ್ದಿದ್ದಾರೆಂದೂ ಅದರ ನಿಮಿತ್ತ ಈ ಪಟ್ಟಣವು ನಾಶವಾಯಿತೆಂದೂ ನೀನು ವೃತಾಂತಗಳ ಪುಸ್ತಕದಲ್ಲಿ ಕಂಡು ತಿಳಿಯುವಿ.

16ಈ ಪಟ್ಟಣವು ತಿರಿಗಿ ಕಟ್ಟಿಸಲ್ಪಟ್ಟು, ಅದರ ಗೋಡೆ ತೀರಿಸಲ್ಪಟ್ಟರೆ ನದಿಯ ಈಚೆಯಲ್ಲಿ ನಿನಗೆ ಭಾಗವಿರುವದಿಲ್ಲ ಎಂಬದಾಗಿ ನಾವು ಅರಸನಿಗೆ ತಿಳಿಯಮಾಡುತ್ತೇವೆ ಎಂದು ಬರೆದು ಕಳುಹಿಸಿದರು.

17ಆಗ ಅರಸನು ಮುಖ್ಯಾಧಿಕಾರಿಯಾದ ರೆಹೂಮ ನಿಗೂ ಶಾಸ್ತ್ರಿಯಾದ ಶಿಂಷೈಗೂ ಸಮಾರ್ಯದಲ್ಲಿರುವ ಮಿಕ್ಕಾದ ಅವರ ಜೊತೆಗಾರರಿಗೂ ನದಿಯ ಆಚೆಯ ಲ್ಲಿರುವ ಉಳಿದವರಿಗೂ--ನಿಮಗೆ ಸಮಾಧಾನವು.

ಎಜ್ರನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी