೨ ಪೂರ್ವಕಾಲವೃತ್ತಾಂತ 4:3

ಅದರ ಕೆಳಭಾಗದಲ್ಲಿ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯ ಲ್ಪಟ್ಟಿದ್ದವು.

ಸಂದರ್ಭದೊಂದಿಗೆ ಓದಿ · ೨ ಪೂರ್ವಕಾಲವೃತ್ತಾಂತ 4

1ಇದಲ್ಲದೆ ಅವನು ತಾಮ್ರದ ಬಲಿಪೀಠ ವನ್ನು ಮಾಡಿದನು. ಅದರ ಉದ್ದ ಇಪ್ಪತ್ತು ಮೊಳ, ಅಗಲ ಇಪ್ಪತ್ತು ಮೊಳ, ಎತ್ತರ ಹತ್ತು ಮೊಳ.

2ಅವನು ಎರಕದ ಸಮುದ್ರವನ್ನು ಮಾಡಿಸಿದನು; ಅದು ಸುತ್ತಲಾಗಿ ಈ ಅಂಚಿನಿಂದ ಆ ಅಂಚಿಗೆ ಹತ್ತು ಮೊಳ, ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ ನೂಲಳತೆಯಾಗಿತ್ತು.

3ಅದರ ಕೆಳಭಾಗದಲ್ಲಿ ಸುತ್ತಲೂ ಎತ್ತುಗಳ ರೂಪಗಳಿದ್ದವು; ಅವು ಒಂದೊಂದು ಮೊಳಕ್ಕೆ ಹತ್ತಾಗಿ ಆ ಸಮುದ್ರದ ಸುತ್ತಲೂ ಇದ್ದವು. ಇದು ಎರಕ ಹೊಯ್ಯಲ್ಪಡುವಾಗ ಎತ್ತುಗಳ ರೂಪ ಎರಡು ಸಾಲಾಗಿ ಎರಕ ಹೊಯ್ಯ ಲ್ಪಟ್ಟಿದ್ದವು.

4ಅದು ಹನ್ನೆರಡು ಎತ್ತುಗಳ ಮೇಲೆ ನಿಂತಿತ್ತು. ಮೂರು ಉತ್ತರಕ್ಕೂ ಮೂರು ಪಶ್ಚಿಮಕ್ಕೂ ಮೂರು ದಕ್ಷಿಣಕ್ಕೂ ಮೂರು ಪೂರ್ವಕ್ಕೂ ನೋಡು ತ್ತಿದ್ದವು. ಆ ಸಮುದ್ರವು ಅವುಗಳ ಮೇಲೆ ಇತ್ತು,

5ಅವುಗಳ ಹಿಂಭಾಗಗಳೆಲ್ಲಾ ಒಳಗಾಗಿದ್ದವು. ಅದರ ದಪ್ಪವು ನಾಲ್ಕು ಬೆರಳಷ್ಟಾಗಿಯೂ ಅದರ ಅಂಚು ಪಾತ್ರೆಯ ಅಂಚಿನ ಹಾಗೆಯೂ ತಾವರೆ ಪುಷ್ಪದ ಹಾಗೆಯೂ ಇತ್ತು; ಅದು ಮೂರು ಸಾವಿರ ಕೊಳಗ ಹಿಡಿಯುವದಾಗಿತ್ತು.

೨ ಪೂರ್ವಕಾಲವೃತ್ತಾಂತ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी