ಈ ವರುಷಗಳಲ್ಲಿ ಅವನು ವಿಮೋಚಿಸಲ್ಪಡದಿದ್ದರೆ ಜೂಬಿಲಿ ಸಂವತ್ಸರದಲ್ಲಿ ಅವನೊಂದಿಗೆ ಅವನ ಮಕ್ಕಳು ಬಿಡುಗಡೆಯಾಗಬೇಕು.
52ಜೂಬಿಲಿ ಸಂವತ್ಸರದ ವರೆಗೆ ಕೆಲವು ವರುಷಗಳು ಮಾತ್ರ ಉಳಿದಿದ್ದರೆ ಅವನೊಂದಿಗೆ ಎಣಿಸಬೇಕು. ಅವನ ವರುಷಗಳ ಮೇರೆಗೆ ತನ್ನ ವಿಮೋಚನೆಯ ಕ್ರಯವನ್ನು ತಿರುಗಿ ಅವನು ಅವನಿಗೆ ಸಲ್ಲಿಸಬೇಕು.
53ವರುಷದ ಕೂಲಿಯಾಳಿನಂತೆ ಅವನ ಬಳಿಯಲ್ಲಿ ಇರಬೇಕು. ಆದರೆ ಮತ್ತೊಬ್ಬನು ನಿನ್ನ ದೃಷ್ಟಿಯಲ್ಲಿ ಅವನ ಮೇಲೆ ಕಠಿಣವಾದ ದೊರೆತನ ಮಾಡಬಾರದು.
54ಈ ವರುಷಗಳಲ್ಲಿ ಅವನು ವಿಮೋಚಿಸಲ್ಪಡದಿದ್ದರೆ ಜೂಬಿಲಿ ಸಂವತ್ಸರದಲ್ಲಿ ಅವನೊಂದಿಗೆ ಅವನ ಮಕ್ಕಳು ಬಿಡುಗಡೆಯಾಗಬೇಕು.
55ಯಾಕಂದರೆ ಇಸ್ರಾಯೇಲ್ ಮಕ್ಕಳು ನನ್ನ ದಾಸರು, ಐಗುಪ್ತದೇಶ ದೊಳಗಿಂದ ನಾನು ಹೊರಗೆ ಬರಮಾಡಿದ ಇವರು ನನ್ನ ದಾಸರೇ. ನಿಮ್ಮ ದೇವರಾದ ಕರ್ತನು ನಾನೇ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ