ಯೆಶಾಯ 48:4

ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆಶಾಯ 48

2ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.

3ಆರಂಭದಲ್ಲೇ ಹಳೇ ಸಂಗತಿಗಳನ್ನು ನಾನು ಪ್ರಕಟಿಸಿದ್ದೇನೆ. ಅವು ನನ್ನ ಬಾಯಿಂದ ಹೊರಟವು ಮತ್ತು ನಾನು ಅವುಗಳನ್ನು ತೋರಿಸಿದ್ದೇನೆ. ನಾನು ತಟ್ಟನೆ ನಡೆಸಲು ಅವು ನೆರವೇರಿದವು.

4ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ಹಿತ್ತಾಳೆ ಎಂದು ನಾನು ತಿಳಿದುಕೊಂಡಿದ್ದೇನೆ.

5ಆದದರಿಂದಲೇ ಈ ಕಾರ್ಯ ಗಳನ್ನು ನನ್ನ ವಿಗ್ರಹವು ನಡಿಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ ಎಂದು ನೀನು ಹೇಳಿಕೊಳ್ಳದಂತೆ ನಾನು ಪುರಾತನ ಕಾಲದಲ್ಲಿಯೇ ತಿಳಿಸಿದೆನು.

6ನೀನು ಕೇಳಿದ್ದೀ; ಇವೆಲ್ಲ ವುಗಳನ್ನು ದೃಷ್ಟಿಸು; ನೀವು ಅದನ್ನು ತಿಳಿಸದೇ ಇದ್ದಿರೋ? ಇಂದಿನಿಂದ ಹೊಸ ಸಂಗತಿಗಳನ್ನು ನೀನು ತಿಳಿಯದಿದ್ದ ಗುಪ್ತವಾದ ವಿಷಯಗಳನ್ನು ನಿನಗೆ ಅರು ಹುತ್ತೇನೆ.

ಯೆಶಾಯ 48 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी