ಪ್ರಲಾಪಗಳು 2:9

ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ; ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಪ್ರಭುಗಳು ಅನ್ಯಜನಾಂಗಗಳ ಮಧ್ಯೆ ಇರುವರು; ಇನ್ನು ನ್ಯಾಯ ಪ್ರಮಾಣವು ಇರುವದೇ ಇಲ್ಲ; ಆಕೆಯ ಪ್ರವಾದಿಗಳು ಸಹ ಕರ್ತನಿಂದ ದರ್ಶನವನ್ನು ಕಂಡು ಕೊಳ್ಳುವದಿಲ್ಲ.

ಸಂದರ್ಭದೊಂದಿಗೆ ಓದಿ · ಪ್ರಲಾಪಗಳು 2

7ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.

8ಕರ್ತನು ಚೀಯೋನಿನ ಮಗಳ ಗೋಡೆಯನ್ನು ನಾಶ ಮಾಡಬೇಕೆಂದು ಉದ್ದೇಶಿಸಿದ್ದಾನೆ; ಗೆರೆಯನ್ನು ಎಳೆದಿದ್ದಾನೆ. ತನ್ನ ಕೈಯನ್ನು ಕೆಡಿಸುವದರಿಂದ ಹಿಂತೆಗೆಯಲಿಲ್ಲ; ಕಲ್ಲಿನ ಪ್ರಾಕಾರವನ್ನೂ ಮತ್ತು ಗೋಡೆ ಯನ್ನೂ ಗೋಳಾಡುವಂತೆ ಆತನು ಮಾಡಿದ್ದಾನೆ, ಅವೆರಡೂ ಜೊತೆಯಾಗಿ ಕುಸಿದು ಹೋಗಿವೆ.

9ಅವಳ ಬಾಗಿಲುಗಳು ನೆಲದೊಳಗೆ ಹೂತುಕೊಂಡಿವೆ; ಆತನು ಆಕೆಯ ಅಗುಳಿಗಳನ್ನು ಮುರಿದು ಹಾಳು ಮಾಡಿದ್ದಾನೆ. ಅವಳ ಅರಸನು ಮತ್ತು ಪ್ರಭುಗಳು ಅನ್ಯಜನಾಂಗಗಳ ಮಧ್ಯೆ ಇರುವರು; ಇನ್ನು ನ್ಯಾಯ ಪ್ರಮಾಣವು ಇರುವದೇ ಇಲ್ಲ; ಆಕೆಯ ಪ್ರವಾದಿಗಳು ಸಹ ಕರ್ತನಿಂದ ದರ್ಶನವನ್ನು ಕಂಡು ಕೊಳ್ಳುವದಿಲ್ಲ.

10ಚೀಯೋನ್‌ ಮಗಳ ಹಿರಿಯರು ನೆಲದ ಮೇಲೆ ಕುಳಿತುಕೊಂಡು ನಿಶ್ಯಬ್ಧವಾಗಿದ್ದಾರೆ; ತಮ್ಮ ತಲೆಗಳ ಮೇಲೆ ದೂಳು ಹಾಕಿಕೊಂಡಿದ್ದಾರೆ; ಅವರು ಗೊಣೀತಟ್ಟನ್ನು ಸುತ್ತಿಕೊಂಡಿದ್ದಾರೆ; ಯೆರೂಸಲೇ ಮಿನ ಕನ್ಯೆಯರು ತಮ್ಮ ತಲೆಯನ್ನು ನೆಲದ ಕಡೆಗೆ ಬೊಗ್ಗಿಸಿಕೊಂಡಿದ್ದಾರೆ.

11ನನ್ನ ಕಣ್ಣುಗಳು ಕಣ್ಣೀರನ್ನು ಸುರಿಸುತ್ತಲೇ ಇವೆ. ನನ್ನ ಕರುಳುಗಳು ಕುದಿಯುತ್ತವೆ, ನನ್ನ ಪಿತ್ತಕೋಶವು ನೆಲದ ಮೇಲೆ ಸುರಿಯಲ್ಪಟ್ಟಿದೆ, ಯಾಕಂದರೆ ನನ್ನ ಜನರ ಮಗಳು ನಾಶವಾಗಿದ್ದಾಳೆ. ಮಕ್ಕಳೂ ಮೊಲೆಕೂಸುಗಳೂ ನಗರದ ಬೀದಿಗಳಲ್ಲಿ ಮೂರ್ಛೆ ಹೋಗಿದ್ದಾರೆ.

ಪ್ರಲಾಪಗಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी