ಯೆರೆಮಿಯ 51:28

ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ ಮೇದ್ಯರ ಅರಸರನ್ನೂ ಅದರ ಅಧಿಪತಿಗಳನ್ನೂ ಅಧಿಕಾರಿಗಳೆಲ್ಲರನ್ನೂ ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.

ಸಂದರ್ಭದೊಂದಿಗೆ ಓದಿ · ಯೆರೆಮಿಯ 51

26ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು; ನೀನು ಎಂದೆಂದಿಗೂ ಹಾಳಾಗುವಿ ಎಂದು ಕರ್ತನು ಅನ್ನುತ್ತಾನೆ.

27ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್‌, ಮಿನ್ನಿ, ಅಷ್ಕೆನಜ್‌ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ.

28ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ ಮೇದ್ಯರ ಅರಸರನ್ನೂ ಅದರ ಅಧಿಪತಿಗಳನ್ನೂ ಅಧಿಕಾರಿಗಳೆಲ್ಲರನ್ನೂ ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.

29ಆಗ ದೇಶವು ಕದಲಿ ವೇದನೆಪಡುವದು; ಬಾಬೆಲಿನ ದೇಶವನ್ನು ನಿವಾಸಿ ಇಲ್ಲದೆ ಹಾಳುಮಾಡುವ ವಿಷಯವಾಗಿ ಬಾಬೆಲಿಗೆ ವಿರೋಧವಾದ ಕರ್ತನ ಆಲೋಚನೆಗಳು ಮಾಡಲ್ಪಡು ವವು.

30ಬಾಬೆಲಿನ ಪರಾಕ್ರಮಶಾಲಿಗಳು ಯುದ್ಧ ಮಾಡುವದನ್ನು ಬಿಟ್ಟಿದ್ದಾರೆ; ಅವರ ಭದ್ರ ಸ್ಥಾನಗಳಲ್ಲಿ ನಿಲ್ಲುತ್ತಾರೆ; ಅವರ ಪರಾಕ್ರಮತನ ತಪ್ಪಿತು; ಅವರು ಹೆಂಗಸರಂತೆ ಅಬಲರಾದರು. ಅದರ ನಿವಾಸಗಳನ್ನು ಸುಟ್ಟಿದ್ದಾರೆ. ಅದರ ಅಗುಳಿಗಳು ಮುರಿಯಲ್ಪಟ್ಟಿವೆ.

ಯೆರೆಮಿಯ 51 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी