ವಿಮೋಚನಕಾಂಡ 24:9

ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 24

7ಇದಲ್ಲದೆ ಒಡಂಬಡಿಕೆಯ ಪ್ರುಸ್ತಕವನ್ನು ತೆಗೆದುಕೊಂಡು ಜನರ ಮುಂದೆ ಓದಿದನು. ಆಗ ಅವರು--ಕರ್ತನು ಹೇಳುವದನ್ನೆಲ್ಲಾ ನಾವು ಮಾಡಿ ವಿಧೇಯರಾಗುವೆವು ಅಂದರು.

8ತರು ವಾಯ ಮೋಶೆಯು ರಕ್ತವನ್ನು ತೆಗೆದುಕೊಂಡು ಜನರ ಮೇಲೆ ಚಿಮುಕಿಸಿ--ಇಗೋ, ಈ ಎಲ್ಲಾ ಮಾತುಗಳ ವಿಷಯದಲ್ಲಿ ಕರ್ತನು ನಿಮ್ಮೊಂದಿಗೆ ಮಾಡಿದ ಒಡಂಬಡಿಕೆಯ ರಕ್ತವು ಇದೇ ಅಂದನು.

9ಆಗ ಮೋಶೆಯೂ ಅರೋನನೂ ನಾದಾಬನೂ ಅಬೀಹುವೂ ಇಸ್ರಾಯೇಲಿನ ಹಿರಿಯರಲ್ಲಿ ಎಪ್ಪತ್ತು ಜನರೂ ಏರಿಹೋದರು.

10ಅವರು ಇಸ್ರಾಯೇಲಿನ ದೇವರನ್ನು ನೋಡಿದರು. ಆತನ ಪಾದಗಳ ಕೆಳಗೆ ನೀಲವರ್ಣದ ಕಲ್ಲಿನ ಕೆಲಸಕ್ಕೆ ಸಮಾನವಾದದ್ದೂ ಆಕಾಶದ ಹಾಗೆ ನಿರ್ಮಲವಾದದ್ದೂ ಇತ್ತು.

11ಆದರೆ ಇಸ್ರಾಯೇಲ್‌ ಮಕ್ಕಳ ಶ್ರೇಷ್ಠರ ಮೇಲೆ ಆತನು ಕೈ ಹಾಕಲಿಲ್ಲ. ಅವರು ಸಹ ದೇವರ ದರ್ಶನದ ನಂತರ ತಿಂದು ಕುಡಿದರು.

ವಿಮೋಚನಕಾಂಡ 24 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी