ಯೋವೇಲ 2:30

ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು.

ಸಂದರ್ಭದೊಂದಿಗೆ ಓದಿ · ಯೋವೇಲ 2

28ಆಮೇಲೆ ಆಗುವದೇನಂದರೆ--ಎಲ್ಲಾ ಶರೀರಗಳ ಮೇಲೆ ನನ್ನ ಆತ್ಮವನ್ನು ಸುರಿಸುವೆನು; ಆಗ ನಿಮ್ಮ ಕುಮಾರರೂ ಕುಮಾರ್ತೆಯರೂ ಪ್ರವಾದಿ ಸುವರು; ನಿಮ್ಮ ವೃದ್ಧರು ಕನಸುಗಳನ್ನು ಕಾಣುವರು; ನಿಮ್ಮ ಯೌವನಸ್ಥರು ದರ್ಶನಗಳನ್ನು ನೋಡುವರು.

29ದಾಸರ ಮೇಲೆಯೂ ದಾಸಿಯರ ಮೇಲೆಯೂ ಆ ದಿವಸಗಳಲ್ಲಿ ನನ್ನ ಆತ್ಮವನ್ನು ಸುರಿಸುವೆನು.

30ಆಕಾಶಗಳಲ್ಲಿ ಮತ್ತು ಭೂಮಿಯಲ್ಲಿ ಅದ್ಭುತಗಳನ್ನೂ ರಕ್ತವನ್ನೂ ಬೆಂಕಿಯನ್ನೂ ಹೊಗೆಯ ಸ್ತಂಭಗಳನ್ನೂ ತೋರಿಸುವೆನು.

31ಕರ್ತನ ದೊಡ್ಡ ಭಯಂಕರವಾದ ದಿನವು ಬರುವದಕ್ಕಿಂತ ಮುಂಚೆ, ಸೂರ್ಯನು ಕತ್ತಲೆಗೂ ಚಂದ್ರನು ರಕ್ತಕ್ಕೂ ಮಾರ್ಪಡುವವು.

32ಆಗುವದೇನಂದರೆ--ಕರ್ತನ ಹೆಸರನ್ನು ಹೇಳಿ ಕೊಳ್ಳುವವರೆಲ್ಲರೂ ರಕ್ಷಿಸಲ್ಪಡುವರು; ಚೀಯೋನ್‌ ಪರ್ವತದಲ್ಲಿಯೂ ಯೆರೂಸಲೇಮಿನಲ್ಲಿಯೂ ಕರ್ತನು ಕರೆಯುವ ಉಳಿದವರಲ್ಲಿಯೂ ಕರ್ತನು ಹೇಳಿದ ಪ್ರಕಾರ ಬಿಡುಗಡೆಯು ಇರುವದು.

ಯೋವೇಲ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी