೨ ಅರಸುಗಳು 7:3

ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು?

ಸಂದರ್ಭದೊಂದಿಗೆ ಓದಿ · ೨ ಅರಸುಗಳು 7

1ಆಗ ಎಲೀಷನು--ನೀವು ಕರ್ತನ ವಾಕ್ಯವನ್ನು ಕೇಳಿರಿ; ಕರ್ತನು ಹೀಗೆ ಹೇಳು ತ್ತಾನೆ -- ನಾಳೆ ಹೆಚ್ಚು ಕಡಿಮೆ ಇಷ್ಟು ಹೊತ್ತಿಗೆ ಸಮಾರ್ಯದ ಬಾಗಲಲ್ಲಿ ಒಂದು ಸೇರು ನಯವಾದ ಹಿಟ್ಟು ಒಂದು ಶೇಕೆಲಿಗೂ ಎರಡು ಸೇರು ಜವೆ ಗೋದಿಯು ಒಂದು ಶೇಕೆಲಿಗೂ ಮಾರಲ್ಪಡುವವು ಅಂದನು.

2ಆಗ ಅರಸನಿಗೆ ಹಸ್ತಕನಾದ ಅಧಿಕಾರಿಯು ದೇವರ ಮನುಷ್ಯನಿಗೆ ಪ್ರತ್ಯುತ್ತರವಾಗಿ -- ಇಗೋ, ಕರ್ತನು ಆಕಾಶದಲ್ಲಿ ಕಿಟಕಿಗಳನ್ನು ಮಾಡಿದರೂ ಸಂಭವಿಸಲಾರದು ಅನ್ನಲು ಎಲೀಷನು ಅವನಿಗೆ ಈ ಕಾರ್ಯವನ್ನು ನೀನು ನಿನ್ನ ಕಣ್ಣುಗಳಿಂದ ನೋಡುವಿ; ಆದರೆ ಅದನ್ನು ತಿನ್ನುವದಿಲ್ಲ ಅಂದನು.

3ಆಗ ಊರು ಬಾಗಲ ದ್ವಾರದಲ್ಲಿ ನಾಲ್ಕುಮಂದಿ ಕುಷ್ಠರೋಗಿಗಳು ಇದ್ದರು. ಅವರು ಒಬ್ಬರಿಗೊಬ್ಬರುನಾವು ಸಾಯುವ ವರೆಗೂ ಇಲ್ಲಿ ಕುಳಿತುಕೊಂಡಿ ರುವದೇನು?

4ನಾವು ಪಟ್ಟಣದಲ್ಲಿ ಪ್ರವೇಶಿಸುವೆವು ಅಂದರೆ ಪಟ್ಟಣದಲ್ಲಿ ಬರವಿರುವದರಿಂದ ಅಲ್ಲಿ ಸಾಯುತ್ತೇವೆ; ಇಲ್ಲಿ ನಾವು ಕುಳಿತಿದ್ದರೂ ಹಾಗೆಯೇ ಸಾಯು ತ್ತೇವೆ. ಆದದರಿಂದ ನಾವು ಅರಾಮ್ಯರ ಪಾಳೆಯಕ್ಕೆ ಹೋಗೋಣ ಬನ್ನಿರಿ; ಅವರು ನಮ್ಮನ್ನು ಬದುಕಿಸಿದರೆ ಬದುಕುವೆವು, ಸಾಯಿಸಿದರೆ ಸಾಯುವೆವು ಅಂದು ಕೊಂಡರು.

5ಹಾಗೆಯೇ ಸಂಜೆಯಲ್ಲಿ ಎದ್ದು ಅರಾಮ್ಯರ ಪಾಳೆಯಕ್ಕೆ ಹೋಗಲು ಅವರು ಅರಾಮ್ಯರ ಪಾಳೆಯದ ಅಂಚಿಗೆ ಬಂದಾಗ ಇಗೋ, ಅಲ್ಲಿ ಯಾರೂ ಇರಲಿಲ್ಲ.

೨ ಅರಸುಗಳು 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी