ವಿಮೋಚನಕಾಂಡ 13:14

ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 13

12ಗರ್ಭ ತೆರೆಯುವದೆಲ್ಲಾ ಅಂದರೆ ನಿನಗಿರುವ ಪಶುಗಳಲ್ಲಿ ಮೊದಲು ಹುಟ್ಟಿದ್ದನ್ನೆಲ್ಲಾ ಪ್ರತ್ಯೇಕಿಸಬೇಕು. ಗಂಡಾದವುಗಳು ಕರ್ತನವುಗಳೇ.

13ಮೊದಲು ಹುಟ್ಟಿದ ಕತ್ತೆಗಳನ್ನೆಲ್ಲಾ ಕುರಿಮರಿ ಯಿಂದ ವಿಮೋಚಿಸಬೇಕು. ಹಾಗೆ ವಿಮೋಚನೆ ಮಾಡದೆಹೋದರೆ ಅದರ ಕುತ್ತಿಗೆ ಮುರಿಯಬೇಕು. ಮನುಷ್ಯರ ಚೊಚ್ಚಲ ಗಂಡುಮಕ್ಕಳನ್ನು ನೀನು ವಿಮೋಚಿಸಬೇಕು.

14ಇದಲ್ಲದೆ ಮುಂದೆ ಬರುವ ಕಾಲದಲ್ಲಿ ನಿನ್ನ ಮಗನು ನಿನಗೆ--ಇದೇನು ಎಂದು ಕೇಳುವಾಗ ನೀನು ಅವನಿಗೆಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದ ದಾಸತ್ವದ ಮನೆಯಿಂದ ಹೊರಗೆ ಬರಮಾಡಿದ್ದಾನೆ.

15ಫರೋಹನು ನಮ್ಮನ್ನು ಕಳುಹಿಸದೆ ಕಠಿಣವಾಗಿದ್ದದರಿಂದ ಕರ್ತನು ಐಗುಪ್ತದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ಅಂದರೆ ಮನುಷ್ಯರಲ್ಲಿ ಚೊಚ್ಚಲಾ ದದ್ದು ಮೊದಲುಗೊಂಡು ಪಶುಗಳ ಚೊಚ್ಚಲಾದ ವುಗಳ ವರೆಗೆ ಕೊಂದುಹಾಕಿದನು. ಆದ್ದರಿಂದ ನಾನು ಚೊಚ್ಚಲಾದ ಗಂಡಾದವುಗಳನ್ನೆಲ್ಲಾ ಕರ್ತನಿಗೆ ಅರ್ಪಿ ಸುತ್ತೇನೆ. ನನ್ನ ಮಕ್ಕಳಲ್ಲಿ ಚೊಚ್ಚಲಾದವರೆಲ್ಲರನ್ನು ವಿಮೋಚಿಸುತ್ತೇನೆ ಎಂದು ಹೇಳಬೇಕು ಅಂದನು.

16ಇದು ನಿನ್ನ ಕೈಮೇಲೆ ಗುರುತಾಗಿಯೂ ನಿನ್ನ ಕಣ್ಣುಗಳ ನಡುವೆ ಹಣೆಯ ಕಟ್ಟಾಗಿಯೂ ಇರಲಿ. ಯಾಕಂದರೆ ಕರ್ತನು ತನ್ನ ಬಲವಾದ ಕೈಯಿಂದ ನಮ್ಮನ್ನು ಐಗುಪ್ತದೊಳಗಿನಿಂದ ಹೊರಗೆ ಬರಮಾಡಿದ್ದಾನೆ.

ವಿಮೋಚನಕಾಂಡ 13 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी