ಯೋನ 4:3

ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.

ಸಂದರ್ಭದೊಂದಿಗೆ ಓದಿ · ಯೋನ 4

1ಆದರೆ ಅದು ಯೋನನಿಗೆ ತುಂಬಾಕರೆಕರೆಯಾಗಿ ಅವನಿಗೆ ಬಹು ಕೋಪ ಬಂತು.

2ಅವನು ಕರ್ತನಿಗೆ ಪ್ರಾರ್ಥನೆ ಮಾಡಿ ಹೇಳಿದ್ದೇನಂದರೆ--ಓ ಕರ್ತನೇ, ನಾನು ನನ್ನ ದೇಶದಲ್ಲಿದ್ದಾಗಲೇ ಇದನ್ನೇ ನಾನು ಹೇಳಲಿಲ್ಲವೋ? ಆದಕಾರಣ ನಾನು ಮೊದಲು ತಾರ್ಷೀಷಿಗೆ ಓಡಿ ಹೋದೆನು; ನೀನು ಕರುಣೆಯೂ ಕನಿಕರವೂ ದೀರ್ಘಶಾಂತಿಯೂ ಬಹಳ ಕೃಪೆಯೂ ಉಳ್ಳದೇವರೆಂದೂ ಕೇಡಿನ ವಿಷಯವಾಗಿ ಪಶ್ಚಾತ್ತಾಪ ಪಡುವಾತನೆಂದೂ ನನಗೆ ತಿಳಿದಿತ್ತು.

3ಆದದರಿಂದ ಓ ಕರ್ತನೇ, ಈಗಲೇ ನನ್ನ ಪ್ರಾಣವನ್ನು ನನ್ನಿಂದ ತೆಗೆ; ನಾನು ಬದುಕುವ ದಕ್ಕಿಂತ ಸಾಯುವದು ಒಳ್ಳೇದು ಅಂದನು.

4ಆಗ ಕರ್ತನು -- ನೀನು ಕೋಪಮಾಡಿಕೊಳ್ಳುವದು ಒಳ್ಳೇದೋ ಎಂದು ಅವನಿಗೆ ಹೇಳಿದನು.

5ಆಗ ಯೋನನು ಪಟ್ಟಣವನ್ನು ಬಿಟ್ಟು ಅದರ ಮೂಡಣ ಕಡೆಯಲ್ಲಿ ಕೂತುಕೊಂಡು ಗುಡಿಸಲನ್ನು ಮಾಡಿಕೊಂಡು ಪಟ್ಟಣದಲ್ಲಿ ಏನಾಗುವದೆಂದು ನೋಡುವ ವರೆಗೆ ಅದರ ನೆರಳಿನಲ್ಲಿ ಕೂತುಕೊಂಡನು.

ಯೋನ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी