ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು--ನಾನು ನಿನಗೆ ಕೊಡಬೇಕಾದದ್ದನ್ನು ಕೇಳಿಕೋ ಅಂದನು.
5ಇದಲ್ಲದೆ ಹೂರನ ಮಗನಾದ ಊರೀ ಯನ ಮಗನಾದ ಬೆಚಲೇಲನು ಮಾಡಿದ ತಾಮ್ರದ ಬಲಿಪೀಠವನ್ನು ಕರ್ತನ ಗುಡಾರದ ಮುಂದೆ ಇಟ್ಟನು. ಸೊಲೊಮೋನನೂ ಸಭೆಯೂ ಅದರ ಮುಂದೆ ವಿಚಾರಿಸುತ್ತಿದ್ದರು.
6ಆಗ ಸೊಲೊಮೋನನು ಸಭೆಯ ಗುಡಾರದ ಬಳಿಯಲ್ಲಿ ಕರ್ತನ ಮುಂದೆ ಇರುವ ತಾಮ್ರಪೀಠದ ಬಳಿಗೆ ಹೋಗಿ ಅದರ ಮೇಲೆ ಸಹಸ್ರ ದಹನಬಲಿಗಳನ್ನು ಅರ್ಪಿಸಿದನು.
7ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು--ನಾನು ನಿನಗೆ ಕೊಡಬೇಕಾದದ್ದನ್ನು ಕೇಳಿಕೋ ಅಂದನು.
8ಆಗ ಸೊಲೊಮೋನನು ದೇವ ರಿಗೆ--ನೀನು ನನ್ನ ತಂದೆಯಾದ ದಾವೀದನಿಗೆ ಬಹು ಕೃಪೆಯನ್ನು ತೋರಿಸಿ ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿ.
9ಈಗ ಕರ್ತನಾದ ದೇವರೇ, ನನ್ನ ತಂದೆಯಾದ ದಾವೀದನಿಗೆ ನೀನು ಮಾಡಿದ ವಾಗ್ದಾನವು ಸ್ಥಾಪಿತವಾಗಲಿ, ಲೆಕ್ಕದಲ್ಲಿ ಧೂಳಿಯ ಹಾಗೆ ಹೆಚ್ಚಾಗಿರುವ ಜನರ ಮೇಲೆ ನನ್ನನ್ನು ಅರಸನಾಗ ಮಾಡಿದಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ