ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
9ಆತನ ಮುಂದೆಯೂ ಹಿಂದೆಯೂ ಹೋಗುತ್ತಿದ್ದ ಜನರ ಸಮೂಹಗಳು--ದಾವೀದನ ಕುಮಾರನಿಗೆ ಹೊಸನ್ನ; ಕರ್ತನ ಹೆಸರಿನಲ್ಲಿ ಬರುವಾತನು ಧನ್ಯನು; ಮಹೋನ್ನತದಲ್ಲಿ ಹೊಸನ್ನ ಎಂದು ಕೂಗುತ್ತಾ ಹೇಳಿದರು.
10ಆತನು ಯೆರೂಸಲೇಮಿಗೆ ಬಂದಾಗ ಪಟ್ಟಣ ವೆಲ್ಲಾ ಕದಲಿ--ಈತನು ಯಾರು ಎಂದು ಕೇಳಿದರು.
11ಅದಕ್ಕೆ ಜನರ ಸಮೂಹವು --ಈತನು ಗಲಿಲಾಯ ದ ನಜರೇತಿನ ಪ್ರವಾದಿಯಾದ ಯೇಸುವು ಎಂದು ಹೇಳಿದರು.
12ಯೇಸು ದೇವಾಲಯದೊಳಗೆ ಹೋಗಿ ಅದರಲ್ಲಿ ಕ್ರಯ ವಿಕ್ರಯ ಮಾಡುವವರನ್ನೆಲ್ಲಾ ಹೊರಗೆ ಹಾಕಿ ಹಣ ಬದಲಾಯಿಸುವವರ ಮೇಜುಗಳನ್ನೂ ಪಾರಿ ವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿ ದನು.
13ಆತನು ಅವರಿಗೆ--ನನ್ನ ಮನೆಯು ಪ್ರಾರ್ಥನೆಯ ಮನೆ ಎಂದು ಕರೆಯಲ್ಪಡುವದಾಗಿ ಬರೆದದೆ; ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ ಎಂದು ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ