೨ ಸಮುವೇಲನು 17:8

ನಿನ್ನ ತಂದೆಯೂ ಅವನ ಜನರೂ ಪರಾಕ್ರಮಶಾಲಿಗಳು; ಅವರು ಅಡವಿಯಲ್ಲಿ ಮರಿಗಳನ್ನು ಕಳಕೊಂಡ ಕರಡಿಯ ಹಾಗೆ ರೋಷ ವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು; ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವದಿಲ್ಲ.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 17

6ಹೂಷೈಯು ಅಬ್ಷಾಲೋಮನ ಬಳಿಗೆ ಬಂದಾಗ ಅಬ್ಷಾಲೋಮನು ಅವನಿಗೆ--ಅಹೀತೋಫೆಲನು ಈ ಪ್ರಕಾರ ಹೇಳಿದ್ದಾನೆ. ಅವನ ಮಾತಿನ ಪ್ರಕಾರ ಮಾಡೋಣವೋ? ಬೇಡವಾದರೆ, ನೀನು ಮಾತ ನಾಡು ಅಂದನು.

7ಆಗ ಹೂಷೈ ಅಬ್ಷಾಲೋಮ ನಿಗೆ--ಅಹೀತೋಫೆಲನು ಹೇಳಿದ ಆಲೋಚನೆಯು ಈ ವೇಳೆಗೆ ಒಳ್ಳೇದಲ್ಲ.

8ನಿನ್ನ ತಂದೆಯೂ ಅವನ ಜನರೂ ಪರಾಕ್ರಮಶಾಲಿಗಳು; ಅವರು ಅಡವಿಯಲ್ಲಿ ಮರಿಗಳನ್ನು ಕಳಕೊಂಡ ಕರಡಿಯ ಹಾಗೆ ರೋಷ ವುಳ್ಳವರಾಗಿದ್ದಾರೆಂದು ನೀನು ಬಲ್ಲೆ. ಇದಲ್ಲದೆ ನಿನ್ನ ತಂದೆಯು ಶೂರನು; ಅವನು ರಾತ್ರಿಯಲ್ಲಿ ಜನರ ಸಂಗಡ ತಂಗುವದಿಲ್ಲ.

9ಇಗೋ, ಅವನು ಈಗ ಒಂದು ಗವಿಯಲ್ಲಾದರೂ ಒಂದು ಸ್ಥಳದಲ್ಲಾದರೂ ಅಡಗಿಕೊಂಡಿರುವನು. ಮೊದಲೇ ಇವರಲ್ಲಿ ಕೆಲವರು ಸತ್ತರೆ ಅದನ್ನು ಕೇಳು ವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು.

10ಆಗ ಸಿಂಹದ ಹೃದಯವುಳ್ಳ ಪರಾಕ್ರಮಶಾಲಿಯ ಹೃದಯವೂ ಸಹ ಸಂಪೂರ್ಣ ಕರಗುವದು. ಇದಲ್ಲದೆ ನಿನ್ನ ತಂದೆಯು ಶೂರನೆಂದೂ ಅವನ ಸಂಗಡ ಇರುವವರು ಪರಾ ಕ್ರಮಶಾಲಿಗಳೆಂದೂ ಇಸ್ರಾಯೇಲ್ಯರೆಲ್ಲರು ಬಲ್ಲರು.

೨ ಸಮುವೇಲನು 17 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी