೨ ಅರಸುಗಳು 1:11

ತಿರುಗಿ ಅರಸನು ಇವನ ಬಳಿಗೆ ಐವತ್ತು ಮಂದಿಯ ಪ್ರಧಾನ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಅವನು ಬಂದು ಇವನಿಗೆ--ದೇವರ ಮನುಷ್ಯನೇ, ಬೇಗ ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.

ಸಂದರ್ಭದೊಂದಿಗೆ ಓದಿ · ೨ ಅರಸುಗಳು 1

9ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.

10ಅದಕ್ಕೆ ಎಲೀಯನು ಐವತ್ತು ಮಂದಿಯ ಪ್ರಧಾನನಿಗೆ ಪ್ರತ್ಯುತ್ತರವಾಗಿ--ನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ದಹಿಸಿಬಿಟ್ಟಿತು.

11ತಿರುಗಿ ಅರಸನು ಇವನ ಬಳಿಗೆ ಐವತ್ತು ಮಂದಿಯ ಪ್ರಧಾನ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಅವನು ಬಂದು ಇವನಿಗೆ--ದೇವರ ಮನುಷ್ಯನೇ, ಬೇಗ ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.

12ಎಲೀಯನು ಅವರಿಗೆ ಪ್ರತ್ಯುತ್ತರವಾಗಿನಾನು ದೇವರ ಮನುಷ್ಯನಾಗಿದ್ದರೆ ಬೆಂಕಿಯು ಆಕಾಶ ದಿಂದ ಇಳಿದು ನಿನ್ನನ್ನೂ ನಿನ್ನ ಐವತ್ತು ಮಂದಿಯನ್ನೂ ದಹಿಸಿಬಿಡಲಿ ಅಂದನು. ತಕ್ಷಣವೇ ದೇವರ ಬೆಂಕಿಯು ಆಕಾಶದಿಂದ ಇಳಿದು ಅವನನ್ನೂ ಅವನ ಐವತ್ತು ಮಂದಿಯನ್ನೂ ಸುಟ್ಟುಬಿಟ್ಟಿತು.

13ತಿರುಗಿ ಅವನು ಐವತ್ತು ಮಂದಿಯ ಪ್ರಧಾನನಾದ ಮೂರನೆಯವ ನನ್ನೂ ಅವನ ಐವತ್ತು ಮಂದಿಯನ್ನೂ ಕಳುಹಿಸಿದನು. ಈ ಐವತ್ತು ಮಂದಿಗೆ ಪ್ರಧಾನನಾದ ಮೂರನೆಯ ವನು ಬಂದು ಎಲೀಯನ ಮುಂದೆ ತನ್ನ ಮೊಣ ಕಾಲೂರಿಕೊಂಡು ಇವನಿಗೆ--ದೇವರ ಮನುಷ್ಯನೇ, ನೀನು ದಯೆತೋರು, ನನ್ನ ಪ್ರಾಣವೂ ನಿನ್ನ ಸೇವಕ ರಾದ ಈ ಐವತ್ತು ಮಂದಿಯ ಪ್ರಾಣಗಳೂ ನಿನ್ನ ಸಮ್ಮುಖದಲ್ಲಿ ಅಮೂಲ್ಯವಾಗಿರಲಿ.

೨ ಅರಸುಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी