ವಿಮೋಚನಕಾಂಡ 9:13

ಕರ್ತನು ಮೋಶೆಗೆ--ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು.

ಸಂದರ್ಭದೊಂದಿಗೆ ಓದಿ · ವಿಮೋಚನಕಾಂಡ 9

11ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳ ಲಾರದೆ ಹೋದರು. ಹುಣ್ಣುಗಳು ಮಂತ್ರಗಾರರ ಲ್ಲಿಯೂ ಐಗುಪ್ತ್ಯರ ಮೇಲೆಲ್ಲಾ ಇದ್ದವು.

12ಆದರೆ ಕರ್ತನು ಫರೋಹನ ಹೃದಯವನ್ನು ಕಠಿಣ ಮಾಡಿ ದನು. ಕರ್ತನು ಮೋಶೆಗೆ ಹೇಳಿದಂತೆಯೇ ಅವನು ಅವರ ಮಾತನ್ನು ಕೇಳಲಿಲ್ಲ.

13ಕರ್ತನು ಮೋಶೆಗೆ--ಬೆಳಿಗ್ಗೆ ಎದ್ದು ಫರೋಹನ ಮುಂದೆ ನಿಂತುಕೊಂಡು ಅವನಿಗೆ--ಇಬ್ರಿಯರ ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನನ್ನನ್ನು ಸೇವಿಸುವ ಹಾಗೆ ನನ್ನ ಜನರನ್ನು ಕಳುಹಿಸು.

14ಭೂಲೋಕ ದಲ್ಲೆಲ್ಲಾ ನನ್ನ ಹಾಗೆ ಯಾರೂ ಇಲ್ಲವೆಂದು ನೀನು ತಿಳಿದುಕೊಳ್ಳುವ ಹಾಗೆ ಈ ಸಾರಿ ನಾನು ಎಲ್ಲಾ ಬಾಧೆಗಳನ್ನು ನಿನ್ನ ಮೇಲೆಯೂ ನಿನ್ನ ಸೇವಕರ ಮೇಲೆಯೂ ನಿನ್ನ ಜನರ ಮೇಲೆಯೂ ಬರಮಾಡು ವೆನು.

15ಈಗ ನನ್ನ ಕೈಚಾಚಿ ನಿನ್ನನ್ನೂ ನಿನ್ನ ಜನರನ್ನೂ ವ್ಯಾಧಿಯಿಂದ ಹೊಡೆಯುವೆನು; ನಿನ್ನನ್ನೂ ಭೂಮಿ ಯೊಳಗಿಂದ ನಿರ್ಮೂಲ ಮಾಡುವೆನು.

ವಿಮೋಚನಕಾಂಡ 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी