೨ ಸಮುವೇಲನು 14:19

ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 14

17ಆಗ ನಿನ್ನ ದಾಸಿಯು--ಅರಸ ನಾದ ನನ್ನ ಒಡೆಯನ ಮಾತು ಆದರಣೆಯಾಗಿರಲಿ; ಒಳ್ಳೇದನ್ನೂ ಕೆಟ್ಟದ್ದನ್ನೂ ವಿವೇಚಿಸುವ ಹಾಗೆ ಅರಸ ನಾದ ನನ್ನ ಒಡೆಯನು ದೇವದೂತನ ಹಾಗೆ ಇದ್ದಾನೆ; ನಿನ್ನ ದೇವರಾದ ಕರ್ತನು ನಿನ್ನ ಸಂಗಡ ಇದ್ದಾನೆ ಅಂದಳು.

18ಆಗ ಅರಸನು ಪ್ರತ್ಯುತ್ತರವಾಗಿ ಆ ಸ್ತ್ರೀಗೆ--ನಾನು ನಿನ್ನಿಂದ ಕೇಳುವದನ್ನು ನನಗೆ ಮರೆಮಾಡಬೇಡ ಅಂದನು. ಅದಕ್ಕವಳು--ಅರಸನಾದ ನನ್ನ ಒಡೆಯನು ಮಾತನಾಡಲಿ ಅಂದಳು.

19ಅದಕ್ಕೆ ಅರಸನು--ಇದೆಲ್ಲಾದರಲ್ಲಿ ಯೋವಾಬನ ಕೈ ನಿನ್ನ ಸಂಗಡ ಉಂಟಲ್ಲವೋ ಅಂದನು. ಆ ಸ್ತ್ರೀಯು ಪ್ರತ್ಯುತ್ತರವಾಗಿ--ನಿನ್ನ ಪ್ರಾಣದ ಜೀವದಾಣೆ, ಅರಸ ನಾದ ನನ್ನ ಒಡೆಯನೇ, ನೀನು ಹೇಳುವವುಗಳಲ್ಲಿ ಒಂದನ್ನಾದರೂ ಯಾವನೂ ಎಡಗಡೆಗಾದರೂ ಬಲ ಗಡೆಗಾದರೂ ತಿರಿಗಿಸಕೂಡದು. ನಿನ್ನ ಸೇವಕನಾದ ಯೋವಾಬನು ನನಗೆ ಆಜ್ಞಾಪಿಸಿ ಈ ಎಲ್ಲಾ ಮಾತು ಗಳನ್ನು ನಿನ್ನ ಸೇವಕಳಿಗೆ ಹೇಳಿಕೊಟ್ಟನು.

20ಈ ಮಾತಿನ ರೂಪವನ್ನು ತಿರುಗಿಸುವದಕ್ಕೆ ನಿನ್ನ ಸೇವಕನಾದ ಯೋವಾಬನು ಇದನ್ನು ಮಾಡಿದ್ದಾನೆ. ಆದರೆ ಭೂಮಿ ಯಲ್ಲಿ ನಡಿಯುವದನ್ನೆಲ್ಲಾ ತಿಳಿಯುವದಕ್ಕೆ ದೇವ ದೂತನ ಜ್ಞಾನದ ಹಾಗೆಯೇ ನನ್ನ ಒಡೆಯನು ಜ್ಞಾನವುಳ್ಳವನಾಗಿದ್ದಾನೆ ಅಂದಳು.

21ಆದದರಿಂದ ಅರಸನು ಯೋವಾಬನಿಗೆಇಗೋ, ನಾನು ಈ ಕಾರ್ಯವನ್ನು ಮಾಡಿದೆನು; ನೀನು ಹೋಗಿ ಯೌವನಸ್ಥನಾದ ಅಬ್ಷಾಲೋಮ ನನ್ನು ತಿರಿಗಿ ಕರಕೊಂಡು ಬಾ ಅಂದನು.

೨ ಸಮುವೇಲನು 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी