ಆಗ ಎಲೀಷನು ಅವನಿಗೆ--ಬಿಲ್ಲನ್ನೂ ಬಾಣಗಳನ್ನೂ ತಕ್ಕೋ ಅಂದನು.
13ಯೆಹೋವಾ ಷನು ತನ್ನ ಪಿತೃಗಳ ಸಂಗಡ ನಿದ್ರಿಸಿದನು; ಸಮಾರ್ಯ ದಲ್ಲಿ ಇಸ್ರಾಯೇಲಿನ ಅರಸುಗಳ ಸ್ಮಶಾನ ಭೂಮಿಯಲ್ಲಿ ಅವನನ್ನು ಹೂಣಿಟ್ಟರು. ಯಾರೊಬ್ಬಾಮನು ಅವನ ಸಿಂಹಾಸನದ ಮೇಲೆ ಕುಳಿತುಕೊಂಡನು.
14ಆಗ ಎಲೀಷನು ಮರಣಕರವಾದ ವ್ಯಾಧಿ ಯಿಂದ ಬಿದ್ದು ಸತ್ತಾಗ ಇಸ್ರಾಯೇಲಿನ ಅರಸನಾದ ಯೋವಾಷನು ಅವನ ಬಳಿಗೆ ಬಂದು ಅವನ ಮುಂದೆ ಬಿದ್ದು ಅತ್ತು ಅವನಿಗೆ--ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥವೂ ಅದರ ಕುದುರೆ ರಾಹುತನೂ ಆದವನೇ ಅಂದನು.
15ಆಗ ಎಲೀಷನು ಅವನಿಗೆ--ಬಿಲ್ಲನ್ನೂ ಬಾಣಗಳನ್ನೂ ತಕ್ಕೋ ಅಂದನು.
16ಅವನು ಬಿಲ್ಲು ಬಾಣಗಳನ್ನು ತಕ್ಕೊಂಡನು. ಅವನು ಇಸ್ರಾಯೇಲಿನ ಅರಸನಿಗೆ--ನಿನ್ನ ಕೈಯನ್ನು ಬಿಲ್ಲಿನ ಮೇಲೆ ಇರಿಸು ಅಂದನು.
17ಅವನು ತನ್ನ ಕೈಯನ್ನು ಇರಿಸಿದನು. ಎಲೀಷನು ತನ್ನ ಕೈಗಳನ್ನು ಅರಸನ ಕೈಗಳ ಮೇಲೆ ಇಟ್ಟನು. ಆಗ ಅವನು--ಮೂಡಲಲ್ಲಿರುವ ಕಿಟಕಿಯನ್ನು ತೆರೆ ಅಂದನು. ಅವನು ತೆರೆದನು. ಎಲೀಷನು--ಎಸೆ ಅಂದನು. ಅವನು ಎಸೆದನು. ಇದು ಕರ್ತನ ರಕ್ಷಣೆಯ ಬಾಣ; ಅರಾಮ್ಯರಿಂದ ತಪ್ಪಿಸುವ ರಕ್ಷಣೆಯ ಬಾಣವೇ, ಏನಂದರೆ ಅಫೇಕದಲ್ಲಿ ಅರಾಮ್ಯರನ್ನು ನಾಶಮಾಡುವ ವರೆಗೂ ಅವರನ್ನು ಹೊಡೆ ಯುವಿ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ