೧ ಅರಸುಗಳು 1:50

ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡುಕೊಂಡನು.

ಸಂದರ್ಭದೊಂದಿಗೆ ಓದಿ · ೧ ಅರಸುಗಳು 1

48ಅರಸನು--ನನ್ನ ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕೂಡುವವನನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ ಅಂದನು.

49ಆಗ ಅದೋನೀ ಯನ ಸಂಗಡವಿದ್ದವರೆಲ್ಲರೂ ಹೆದರಿಕೊಂಡು ಎದ್ದು ತಮ್ಮ ತಮ್ಮ ಸ್ಥಳಗಳಿಗೆ ಹೋದರು.

50ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡುಕೊಂಡನು.

51ಆಗ ಒಬ್ಬನು ಅರಸನಾದ ಸೊಲೊಮೋನನಿಗೆ--ಇಗೋ, ಅದೋ ನೀಯನು ನಿನಗೆ ಭಯಪಡುತ್ತಾನೆ; ಯಾಕಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು --ಅರಸನಾದ ಸೊಲೊಮೋನನು ಕತ್ತಿಯಿಂದ ತನ್ನ ಸೇವಕನನ್ನು ಕೊಲ್ಲುವದಿಲ್ಲವೆಂದು ಈ ಹೊತ್ತು ನನಗೆ ಆಣೆ ಇಡಲಿ ಎಂದು ಹೇಳಿದನು.

52ಅದಕ್ಕೆ ಸೊಲೊ ಮೋನನು--ಅವನು ಉತ್ತಮನಾಗಿದ್ದರೆ ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು; ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು ಅಂದನು.

೧ ಅರಸುಗಳು 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी