ಪ್ರಕಟನೆ 22:16

ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.

ಸಂದರ್ಭದೊಂದಿಗೆ ಓದಿ · ಪ್ರಕಟನೆ 22

14ಆತನ ಆಜ್ಞೆಗಳನ್ನು ಕೈಕೊಂಡು ನಡೆಯುವವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಹೆಬ್ಬಾಗಿಲು ಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.

15ಆದರೆ ನಾಯಿಗಳೂ ಮಾಟಗಾರರೂ ಜಾರರೂ ಕೊಲೆ ಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.

16ಯೇಸುವೆಂಬ ನಾನು ಸಭೆಗಳಲ್ಲಿ ಇವುಗಳ ವಿಷಯವಾಗಿ ನಿಮಗೆ ಸಾಕ್ಷಿ ಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದನ ಬೇರೂ ಸಂತತಿಯೂ ಉದಯದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.

17ಆತ್ಮನೂ ಮದಲಗಿತ್ತಿಯೂ--ಬಾ, ಅನ್ನುತ್ತಾರೆ. ಕೇಳುವವನು--ಬಾ, ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.

18ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂ ದರೆ--ಯಾವನಾದರೂ ಇವುಗಳಿಗೆ ಕೂಡಿಸಿದರೆ ದೇವರು ಅವನಿಗೆ ಈ ಪುಸ್ತಕದಲ್ಲಿ ಬರೆದಿರುವ ಉಪ ದ್ರವಗಳನ್ನು ಕೂಡಿಸುವನು.

ಪ್ರಕಟನೆ 22 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी