ಅಪೊಸ್ತಲರ ಕೃತ್ಯಗಳು 20:36

ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 20

34ಹೌದು, ಈ ಕೈಗಳೇ ಕೆಲಸಮಾಡಿ ನನ್ನ ಕೊರತೆಗಳನ್ನೂ ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನೂ ನೀಗಿದ್ದನ್ನು ನೀವೇ ಬಲ್ಲಿರಿ.

35ನೀವು ಹಾಗೆಯೇ ಕೆಲಸಮಾಡಿ ಬಲಹೀನ ರಿಗೆ ಹೀಗೆ ಆಧಾರವಾಗಿರತಕ್ಕದ್ದೆಂದೂ ಮತ್ತು--ತೆಗೆದುಕೊಳ್ಳುವದಕ್ಕಿಂತ ಕೊಡುವದೇ ಹೆಚ್ಚಿನ ಭಾಗ್ಯ ವೆಂದು ಕರ್ತನಾದ ಯೇಸು ಹೇಳಿದ ಮಾತುಗಳನ್ನು ನೀವು ಜ್ಞಾಪಕ ಮಾಡಿಕೊಳ್ಳಬೇಕೆಂದೂ ಇವೆಲ್ಲವು ಗಳನ್ನು ನಾನು ನಿಮಗೆ ತಿಳಿಯಪಡಿಸಿದ್ದೇನೆ.

36ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆ ಮಾಡಿದನು.

37ಆಗ ಅವರೆಲ್ಲರೂ ಬಹಳವಾಗಿ ಅತ್ತು ಪೌಲನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.

38ತನ್ನ ಮುಖವನ್ನು ಅವರು ಇನ್ನು ನೋಡುವದಿಲ್ಲವೆಂದು ಹೇಳಿದ ಮಾತುಗಳಿಗೆ ಅವರು ಬಹಳವಾಗಿ ವ್ಯಥೆಪಟ್ಟರು. ತರುವಾಯ ಅವರು ಅವನನ್ನು ಹಡಗಿನ ವರೆಗೆ ಸಾಗ ಕಳುಹಿಸಿದರು.

ಅಪೊಸ್ತಲರ ಕೃತ್ಯಗಳು 20 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी