ಅಪೊಸ್ತಲರ ಕೃತ್ಯಗಳು 2:35

ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 2

33ದೇವರ ಬಲಗೈಯಿಂದ ಆತನು ಉನ್ನತ ಸ್ಥಾನಕ್ಕೆ ಏರಿಸಲ್ಪಟ್ಟು ತಂದೆಯಿಂದ ಪವಿತ್ರಾತ್ಮನ ವಾಗ್ದಾನವನ್ನು ಹೊಂದಿ ನೀವು ಈಗ ನೋಡಿ ಕೇಳುವದನ್ನು ಆತನು ಸುರಿಸಿದ್ದಾನೆ.

34ಯಾಕಂದರೆ ದಾವೀದನು ಆಕಾಶಗಳಿಗೆ ಏರಿಹೋಗಲಿಲ್ಲ; ಆದರೆ ಕರ್ತನು ನನ್ನ ಕರ್ತನಿಗೆ--

35ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ತಾನೇ ಹೇಳುತ್ತಾನೆ.

36ಆದದರಿಂದ ನೀವು ಶಿಲುಬೆಗೆ ಹಾಕಿದ ಈ ಯೇಸುವನ್ನೇ ದೇವರು ಕರ್ತನನ್ನಾಗಿಯೂ ಕ್ರಿಸ್ತನನ್ನಾಗಿಯೂ ಮಾಡಿದ್ದಾನೆಂದು ಇಸ್ರಾಯೇಲ್‌ ಮನೆತನದವರೆಲ್ಲರಿಗೂ ನಿಶ್ಚಯವಾಗಿ ತಿಳಿದಿರಲಿ ಎಂದು ಹೇಳಿದನು.

37ಅವರು ಇದನ್ನು ಕೇಳಿ ತಮ್ಮ ಹೃದಯದಲ್ಲಿ ತಿವಿಯಲ್ಪಟ್ಟವರಾಗಿ ಪೇತ್ರನಿಗೂ ಉಳಿದ ಅಪೊಸ್ತಲರಿಗೂ--ಜನರೇ, ಸಹೋದರರೇ, ನಾವು ಏನು ಮಾಡಬೇಕು ಎಂದು ಕೇಳಿದರು.

ಅಪೊಸ್ತಲರ ಕೃತ್ಯಗಳು 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी