ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು;
22ಅವರು ಇಬ್ರಿಯರೋ? ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೊ? ನಾನೂ ಇಸ್ರಾಯೇ ಲ್ಯನು; ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು;
23ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು.
24ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು;
25ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು.
26ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ