ಯೆಹೋಶುವ 7:20

ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್‌ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ.

ಸಂದರ್ಭದೊಂದಿಗೆ ಓದಿ · ಯೆಹೋಶುವ 7

18ಅವನ ಮನೆಯವರನ್ನು ಅವನು ಹೆಸರುಹೆಸರಾಗಿ ಕರೆದಾಗ ಯೂದನ ಗೋತ್ರದ ಜೆರಹನ ಮಗನಾದ ಜಬ್ದೀಯ ಮಗನಾದ ಕರ್ವಿಾಯ ಮಗನಾದ ಆಕಾನನು ಹಿಡಿಯಲ್ಪಟ್ಟನು.

19ಆಗ ಯೆಹೋಶುವನು ಆಕಾನನಿಗೆ--ನನ್ನ ಮಗನೇ, ನೀನು ಈಗ ಇಸ್ರಾ ಯೇಲಿನ ದೇವರಾದ ಕರ್ತನನ್ನು ಘನಪಡಿಸಿ ಆತನಿಗೆ ಅರಿಕೆಮಾಡು; ಏನು ಮಾಡಿದಿಯೋ ಅದನ್ನು ನನಗೆ ತಿಳಿಸು; ನನಗೆ ಮರೆಮಾಡಬೇಡ ಅಂದನು.

20ಆಗ ಆಕಾನನು ಯೆಹೋಶುವನಿಗೆ ಪ್ರತ್ಯುತ್ತರವಾಗಿ--ನಿಜವಾಗಿ ನಾನು ಇಸ್ರಾಯೇಲ್‌ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ಇಂತಿಂಥವುಗಳನ್ನು ಮಾಡಿದ್ದೇನೆ.

21ಏನಂದರೆ, ನಾನು ಕೊಳ್ಳೆಯಲ್ಲಿ ಬಾಬೆಲಿನ ಒಂದು ಒಳ್ಳೇ ನಿಲುವಂಗಿಯನ್ನೂ ಇನ್ನೂರು ಬೆಳ್ಳಿ ಶೇಕೆಲುಗಳನ್ನೂ ಐವತ್ತು ಶೇಕೆಲ್‌ ತೂಕವಾದ ಒಂದು ಬಂಗಾರದ ಗಟ್ಟಿಯನ್ನೂ ಕಂಡು ಅವುಗಳನ್ನು ಆಶಿಸಿ ತೆಗೆದುಕೊಂಡೆನು; ಇಗೋ, ಅವುಗಳನ್ನು ನನ್ನ ಗುಡಾರದ ಮಧ್ಯದಲ್ಲಿ ನೆಲದೊಳಗೆ ಬಚ್ಚಿಟ್ಟಿದ್ದೇನೆ; ಬೆಳ್ಳಿಯೂ ಅದರ ಕೆಳಗೆ ಇದೆ ಅಂದನು.

22ಆಗ ಯೆಹೋಶುವನು ದೂತರನ್ನು ಕಳುಹಿಸಿದನು; ಅವರು ಡೇರೆಗಳಿಗೆ ಓಡಿದರು; ಇಗೋ, ಡೇರೆಯಲ್ಲಿ ಅವು ಬಚ್ಚಿಡಲ್ಪಟ್ಟಿದ್ದವು; ಬೆಳ್ಳಿಯು ಅದರ ಕೆಳಗೆ ಇತ್ತು.

ಯೆಹೋಶುವ 7 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी