ಯಾಜಕಕಾಂಡ 2:2

ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 2

1ಯಾರಾದರೂ ಕರ್ತನಿಗೆ ಆಹಾರ ಸಮರ್ಪಣೆಯನ್ನು ಸಮರ್ಪಿಸುವದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರ ಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಯ ಬೇಕು; ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು.

2ಇದಲ್ಲದೆ ಅವನು ಅದನ್ನು ಯಾಜಕರಾದ ಆರೋನನ ಕುಮಾರರ ಬಳಿಗೆ ತರಬೇಕು; ಅವನು ಹಿಟ್ಟಿನಲ್ಲಿಯೂ ಎಣ್ಣೆಯಲ್ಲಿಯೂ ಒಂದು ಹಿಡಿಯನ್ನು ಅದರ ಎಲ್ಲಾ ಸಾಂಬ್ರಾಣಿಯ ಸಂಗಡ ತೆಗೆದುಕೊಳ್ಳಬೇಕು. ಯಾಜ ಕನು ಅದನ್ನು ಜ್ಞಾಪಕಾರ್ಥವಾಗಿ ಯಜ್ಞವೇದಿಯ ಮೇಲೆ ಕರ್ತನಿಗೆ ಸುವಾಸನೆಯ ಸಮರ್ಪಣೆಯಾಗಿ ಬೆಂಕಿಯಿಂದ ಸುಡಬೇಕು.

3ಆಹಾರದ ಸಮರ್ಪಣೆ ಯಲ್ಲಿ ಉಳಿದದ್ದು ಆರೋನನಿಗೂ ಅವನ ಕುಮಾರ ರಿಗೂ ಆಗಬೇಕು; ಅದು ಬೆಂಕಿಯಿಂದ ಮಾಡಿದ ಕರ್ತನ ಸಮರ್ಪಣೆಗಳಲ್ಲಿ ಅತಿ ಪರಿಶುದ್ಧವಾದದ್ದು.

4ನೀನು ಒಲೆಯಲ್ಲಿ ಸುಟ್ಟ ಆಹಾರ ಸಮರ್ಪಣೆ ಯನ್ನು ಕಾಣಿಕೆಯಾಗಿ ತರುವದಾದರೆ ಅದು ಹುಳಿ ಯಿಲ್ಲದ್ದಾಗಿ ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು.

ಯಾಜಕಕಾಂಡ 2 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी