ಆದಿಕಾಂಡ 42:36

ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.

ಸಂದರ್ಭದೊಂದಿಗೆ ಓದಿ · ಆದಿಕಾಂಡ 42

34ನಿಮ್ಮ ಚಿಕ್ಕ ತಮ್ಮನನ್ನು ನನ್ನ ಬಳಿಗೆ ತನ್ನಿರಿ, ಆಗ ನೀವು ಗೂಢಚಾರರಲ್ಲವೆಂದೂ ಯಥಾರ್ಥ ರೆಂದೂ ತಿಳುಕೊಂಡು ನಿಮ್ಮ ಸಹೋದರನನ್ನು ನಿಮಗೆ ಒಪ್ಪಿಸುವೆನು. ಆಗ ನೀವು ದೇಶದಲ್ಲಿ ವ್ಯಾಪಾರ ಮಾಡಬಹುದು ಎಂದು ಹೇಳಿದನು ಅಂದರು.

35ಇದಲ್ಲದೆ ಅವರು ತಮ್ಮ ಚೀಲಗಳನ್ನು ಬರಿದು ಮಾಡುತ್ತಿದ್ದಾಗ ಇಗೋ, ಅವನವನ ಹಣದ ಗಂಟು ಅವನವನ ಚೀಲದಲ್ಲಿ ಇತ್ತು. ಅವರೂ ಅವರ ತಂದೆಯೂ ಆ ಹಣದ ಗಂಟುಗಳನ್ನು ನೋಡಿ ಭಯಪಟ್ಟರು.

36ಆಗ ಅವರ ತಂದೆಯಾದ ಯಾಕೋಬನು ಅವರಿಗೆ--ನನ್ನನ್ನು ಮಕ್ಕಳಿಲ್ಲದವ ನನ್ನಾಗಿ ಮಾಡಿದ್ದೀರಿ. ಯೋಸೇಫನೂ ಇಲ್ಲ, ಸಿಮೆಯೋನನೂ ಇಲ್ಲ, ಬೆನ್ಯಾವಿಾನನ್ನೂ ಕರಕೊಂಡು ಹೋಗುವದಕ್ಕಿದ್ದೀರಿ. ಇವುಗಳೆಲ್ಲಾ ನನಗೆ ವಿರೋಧವಾಗಿವೆ ಅಂದನು.

37ರೂಬೇನನು ತನ್ನ ತಂದೆಗೆ--ನಾನು ಅವನನ್ನು ನಿನ್ನ ಬಳಿಗೆ ತಾರದೆ ಹೋದರೆ ನನ್ನ ಇಬ್ಬರು ಕುಮಾರರನ್ನು ಕೊಂದುಬಿಡು. ನೀನು ಅವನನ್ನು ನನ್ನ ಕೈಯಲ್ಲಿ ಒಪ್ಪಿಸು. ನಾನು ಅವನನ್ನು ನಿನ್ನ ಬಳಿಗೆ ತಿರಿಗಿ ತರುವೆನು ಅಂದನು.

38ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.

ಆದಿಕಾಂಡ 42 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी