ಯೆಹೆಜ್ಕೇಲನು 32:22

ಅಲ್ಲಿ ಅಶ್ಶೂರ್ಯ ಮತ್ತು ಅದರ ಎಲ್ಲಾ ಗುಂಪು ಇರುವದು; ಸುತ್ತಲೂ ಅದರ ಸಮಾಧಿಗಳಿರುವವು; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ.

ಸಂದರ್ಭದೊಂದಿಗೆ ಓದಿ · ಯೆಹೆಜ್ಕೇಲನು 32

20ಅವರು ಕತ್ತಿಯಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಅವಳು ಕತ್ತಿಗೆ ಒಪ್ಪಿಸಲ್ಪಟ್ಟಿದ್ದಾಳೆ; ಅವಳನ್ನೂ ಅವಳ ಎಲ್ಲಾ ಸಮೂಹವನ್ನೂ ಎಳೆಯಿರಿ.

21ಶೂರರಲ್ಲಿ ಬಲಿಷ್ಠರೂ ಅವನಿಗೆ ಸಹಾಯ ಮಾಡಿದವರ ಸಂಗಡ ಪಾತಾಳದೊಳಗಿಂದ ಅವನ ಸಂಗಡ ಮಾತನಾಡುವರು; ಅವರು ಇಳಿದುಹೋಗಿ ಸುನ್ನತಿ ಯಿಲ್ಲದವರಾಗಿಯೂ ಕತ್ತಿಯಿಂದ ಹತರಾದವರಾ ಗಿಯೂ ಮಲಗಿದ್ದಾರೆ.

22ಅಲ್ಲಿ ಅಶ್ಶೂರ್ಯ ಮತ್ತು ಅದರ ಎಲ್ಲಾ ಗುಂಪು ಇರುವದು; ಸುತ್ತಲೂ ಅದರ ಸಮಾಧಿಗಳಿರುವವು; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ.

23ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು.

24ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ.

ಯೆಹೆಜ್ಕೇಲನು 32 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी