೨ ಸಮುವೇಲನು 9:11

ಆಗ ಚೀಬನು ಅರಸನಿಗೆ--ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು ಅಂದನು. ಅರಸನ ಕುಮಾರ ರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.

ಸಂದರ್ಭದೊಂದಿಗೆ ಓದಿ · ೨ ಸಮುವೇಲನು 9

9ಆಗ ಅರಸನು ಸೌಲನ ದಾಸನಾದ ಚೀಬನನ್ನು ಕರೆದು ಅವನಿಗೆ--ನಾನು ಸೌಲನಿಗೂ ಅವನ ಎಲ್ಲ ಮನೆಗೂ ಹೊಂದಿದ ಎಲ್ಲವನ್ನೂ ನಿನ್ನ ಯಜಮಾನನ ಮಗನಿಗೆ ಕೊಟ್ಟಿದ್ದೇನೆ.

10ಆದದರಿಂದ ನೀನೂ ನಿನ್ನ ಕುಮಾರರೂ ನಿನ್ನ ದಾಸರೂ ನಿನ್ನ ಯಜಮಾನನ ಮಗನಿಗೆ ಆಹಾರ ಒದಗಿಸುವ ಹಾಗೆ ಅವನಿಗೋಸ್ಕರ ಭೂಮಿಯನ್ನು ವ್ಯವಸಾಯಮಾಡಿ ಅದರ ಫಲವನ್ನು ತರಬೇಕು. ಆದರೆ ನಿನ್ನ ಯಜಮಾನನ ಮಗನಾದ ಮೆಫೀಬೋಶೆ ತನು ನಿತ್ಯವೂ ನನ್ನ ಮೇಜಿನಲ್ಲಿ ಊಟ ಮಾಡುವನು ಅಂದನು. ಈ ಚೀಬನಿಗೆ ಹದಿನೈದು ಮಂದಿ ಕುಮಾ ರರೂ ಇಪ್ಪತ್ತು ಮಂದಿ ದಾಸರೂ ಇದ್ದರು.

11ಆಗ ಚೀಬನು ಅರಸನಿಗೆ--ಅರಸನಾದ ನನ್ನ ಒಡೆಯನು ತನ್ನ ದಾಸನಿಗೆ ಆಜ್ಞಾಪಿಸಿದ್ದನ್ನೆಲ್ಲಾ ನಿನ್ನ ದಾಸನು ಹಾಗೆಯೇ ಮಾಡುವನು ಅಂದನು. ಅರಸನ ಕುಮಾರ ರಲ್ಲಿ ಒಬ್ಬನ ಹಾಗೆ ಮೆಫೀಬೋಶೆತನು ಭೋಜನ ಮಾಡುವನೆಂದು ಅರಸನು ಹೇಳಿದನು.

12ಆದರೆ ಮೆಫೀಬೋಶೆತನಿಗೆ ವಿಾಕನೆಂಬ ಹೆಸರುಳ್ಳ ಒಬ್ಬ ಚಿಕ್ಕ ಮಗನಿದ್ದನು. ಚೀಬನ ಮನೆಯಲ್ಲಿ ವಾಸವಾ ಗಿದ್ದ ಎಲ್ಲರೂ ಮೆಫೀಬೋಶೆತನಿಗೆ ದಾಸರಾಗಿದ್ದರು.

13ಹೀಗೆಯೇ ಮೆಫೀಬೋಶೆತನು ಅರಸನ ಪಂಕ್ತಿಯಲ್ಲಿ ನಿತ್ಯವೂ ಭೋಜನ ಮಾಡುತ್ತಿದದ್ದರಿಂದ ಯೆರೂ ಸಲೇಮಿನಲ್ಲೇ ವಾಸವಾಗಿದ್ದನು. ಅವನ ಎರಡು ಕಾಲು ಕುಂಟಾಗಿದ್ದವು.

೨ ಸಮುವೇಲನು 9 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी