ಯೆಶಾಯ 55:12

ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.

ಸಂದರ್ಭದೊಂದಿಗೆ ಓದಿ · ಯೆಶಾಯ 55

10ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,

11ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.

12ನೀವು ಆನಂದದೊಡನೆ ಹೋಗುವಿರಿ ಸಮಾಧಾನದಿಂದ ನಡಿಸಲ್ಪಡುವಿರಿ; ಪರ್ವತಗಳು ಮತ್ತು ಗುಡ್ಡಗಳು ನಿಮ್ಮ ಮುಂದೆ ಹರ್ಷಧ್ವನಿಗೈಯುವವು. ಹೊಲದ ಮರಗಳೆಲ್ಲಾ ಚಪ್ಪಾಳೆ ಹೊಡೆಯುವವು.

13ಮುಳ್ಳಿಗೆ ಬದಲಾಗಿ ಫರ್‌ (ತುರಾಯಿ) ಮರವು ಮತ್ತು ದತ್ತೂರಿಗೆ ಬದಲಾಗಿ ಸುವಾಸನೆ ಬೀರುವ ಮರವು ಹುಟ್ಟುವವು; ಅದು ಕರ್ತನ ಹೆಸರಿಗಾಗಿ ಮತ್ತು ಶಾಶ್ವತವಾದ ಗುರುತಾಗಿ ಎಂದಿಗೂ ಅಳಿಯದಿರುವದು.

ಯೆಶಾಯ 55 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी